ಸನಾತನ ಧರ್ಮ ನಿರ್ಮೂಲನೆ ಮಾಡಬೇಕು: ನಾನು ನನ್ನ ಹೇಳಿಕೆಗೆ ಬದ್ಧ: ಉದಯನಿಧಿ ಸ್ಟಾಲಿನ್

ಚೆನ್ನೈ: ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದು, ನನ್ನ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸಲು ಸಿದ್ಧ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ, ಕೊರೊನಾ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎನ್ನುವ ಹೇಳಿಕೆಯ ಬಗ್ಗೆ ಸ್ಪಷ್ಟಪಡಿಸಿರುವ ಅವರು, ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಅವರು ಹೇಳಿದರು.
ಸನಾತನ ಧರ್ಮವು ಡೆಂಗ್ಯೂ, ಮಲೇರಿಯ ಇದ್ದಂತೆ ಅದನ್ನು ವಿರೋಧಿಸಬಾರದು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಿಎಂ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದು, ಇದು ಬ್ರಾಹ್ಮಣ್ಯ ಸಿದ್ಧಾಂತದ ಸಂಘಟನೆ ಹಾಗೂ ಮುಖಂಡರ ಕೆಂಗಣ್ಣಿಗೆ ಗುರಿಯಾಗಿತ್ತು. ತಮಿಳುನಾಡು ಬಿಜೆಪಿ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಬೆನ್ನಲ್ಲೇ “ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಉದಯನಿಧಿ ಸ್ಟಾಲಿನ್” ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನಾನು ಸನಾತನ ಧರ್ಮವನ್ನು ಮಾತ್ರ ಟೀಕಿಸಿದ್ದೇನೆ. ಕೆಲವರು ನಾನು ನರಮೇಧಕ್ಕೆ ಕರೆ ನೀಡಿದ್ದೇನೆ ಅಂತ ಬಾಲಿಶತನದಿಂದ ಮಾತನಾಡುತ್ತಿದ್ದಾರೆ. ದ್ರಾವಿಡರನ್ನು ನಿರ್ಮೂಲನೆ ಮಾಡಬೇಕು ಎಂದು ಕೆಲವರು ಮಾತನಾಡಿದ್ದಾರೆ. ಹಾಗಾದ್ರೆ ಅವರು ಡಿಎಂಕೆ ಪಕ್ಷದವರನ್ನ ಕೊಲ್ಲಬೇಕು ಅಂತ ಹೇಳುತ್ತಿದ್ದಾರೆಯೇ? , ಕಾಂಗ್ರೆಸ್ ಮುಕ್ತ ಅಂದ್ರೆ, ಕಾಂಗ್ರೆಸ್ ಪಕ್ಷದವರನ್ನ ಕೊಲ್ಲಬೇಕು ಎಂದು ಅರ್ಥವೇ? ಎಂದು ಉದಯನಿಧಿ ಸ್ಟಾಲಿನ್ ಮರು ಪ್ರಶ್ನೆ ಹಾಕಿದ್ದಾರೆ.