ಡ್ರಗ್ಸ್ ಕೇಸ್: ನಟಿ ಸಂಜನಾಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ - Mahanayaka

ಡ್ರಗ್ಸ್ ಕೇಸ್: ನಟಿ ಸಂಜನಾಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

11/12/2020

ಬೆಂಗಳೂರು: ಡ್ರಗ್ಸ್ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ಬಹುಭಾಷಾ ನಟಿ ಸಂಜನಾ ಗಲ್ರಾನಿಗೆ ಜಾಮೀನು ಮಂಜೂರಾಗಿದ್ದು, ಸಂಜನಾಗೆ ಜಾಮೀನು ದೊರೆತಿದ್ದರೂ, ನಟಿ ರಾಗಿಣಿಗೆ ಇನ್ನೂ ಜಾಮೀನು ಭಾಗ್ಯ ಸಿಕ್ಕಿಲ್ಲ.

ವೈದ್ಯಕೀಯ ಕಾರಣಗಳ ಹಿನ್ನೆಲೆಯಲ್ಲಿ ಸಂಜನಾಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಅನಾರೋಗ್ಯದಿಂದ ಬಳಲುತ್ತಿರುವ ಸಂಜನಾಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವಾಣಿವಿಲಾಸ ಆಸ್ಪತ್ರೆ ವೈದ್ಯರು ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದರು.

ಈ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ನೇತೃತ್ವದ ಏಕಸದಸ್ಯ ಪೀಠ, ಅರ್ಜಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತ್ತು. ಇದೀಗ ನಟಿ ಸಂಜನಾಗೆ ಜಾಮೀನು ನೀಡಲಾಗಿದೆ.


Provided by

ಇತ್ತೀಚಿನ ಸುದ್ದಿ