ಸರಬ್ಜಿತ್ ಸಿಂಗ್ ಹಂತಕ ಅಮೀರ್ ಸರ್ಫರಾಜ್ ರನ್ನು ಗುಂಡಿಕ್ಕಿ ಹತ್ಯೆ

ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ಅವರನ್ನು ಜೈಲಿನಲ್ಲಿ ಕೊಂದ ಪಾಕಿಸ್ತಾನದ ಭೂಗತ ಪಾತಕಿಯನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಭಾನುವಾರ ಲಾಹೋರ್‌ನಲ್ಲಿ ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ.
ಪಾಕಿಸ್ತಾನದ ವಾಂಟೆಡ್ ಭೂಗತ ಪಾತಕಿಗಳಲ್ಲಿ ಒಬ್ಬನಾದ ಅಮೀರ್ ಸರ್ಫರಾಜ್ ಅಲಿಯಾಸ್ ತಾಂಬಾ ಮೇಲೆ ಲಾಹೋರ್ ನ ಇಸ್ಲಾಂಪುರ ಪ್ರದೇಶದಲ್ಲಿ ಬೈಕಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಅಲ್ಲಿ ಅವರು ಸಾವನ್ನಪ್ಪಿದರು ಎಂದು ಮೂಲಗಳು ತಿಳಿಸಿವೆ.
1979ರಲ್ಲಿ ಲಾಹೋರ್ ನಲ್ಲಿ ಜನಿಸಿದ ಅಮೀರ್ ಸರ್ಫರಾಜ್, ಲಷ್ಕರ್-ಎ-ತೊಯ್ಬಾ ಸಂಸ್ಥಾಪಕನ ನಿಕಟವರ್ತಿಯಾಗಿದ್ದ.
ಜೈಲಿನಲ್ಲಿ ಸರಬ್ಜಿತ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅಮೀರ್ ಸರ್ಫರಾಜ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದಾಗ್ಯೂ, ಸರ್ಫರಾಜ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಪಾಕಿಸ್ತಾನ ನ್ಯಾಯಾಲಯವು 2018 ರಲ್ಲಿ ಅವರನ್ನು ಖುಲಾಸೆಗೊಳಿಸಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth