ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಶೇ.15ರಷ್ಟು ಹೆಚ್ಚಿಸಿ ಅಧಿಕೃತ ಆದೇಶ - Mahanayaka
4:27 PM Tuesday 9 - September 2025

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಶೇ.15ರಷ್ಟು ಹೆಚ್ಚಿಸಿ ಅಧಿಕೃತ ಆದೇಶ

ksrtc
30/03/2023

ಬೆಂಗಳೂರು:  ರಾಮನವಮಿಯಂದೇ  ರಾಜ್ಯ ಸಾರಿಗೆ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು,  ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.


Provided by

ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ. 2023ರ ಮಾರ್ಚ್ ತಿಂಗಳಿನಿಂದಲೇ ನೂತನ ವೇತನ ಜಾರಿ ಬರುವಂತೆ ಇಂದು ಅದೇಶಿಸಿದೆ.

ಸಾರಿಗೆ ನೌಕರರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮಾ.21ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿತ್ತು. ಆದ್ರೆ, ಸರ್ಕಾರ ಮಾರ್ಚ್​ 28ರಂದು ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಹೇಳಿತ್ತು. ಇದೀಗ ಅದರಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ