ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ | ಸಚಿವ ಲಕ್ಷ್ಮಣ ಸವದಿ
ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಇದೇ ಸಂದರ್ಭದಲ್ಲಿ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.
ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ನಿಗಮದ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಿದರೆ, ಇತರ ನಿಗಮಗಳೂ ಇದೇ ಬೇಡಿಯನ್ನಿಡುತ್ತವೆ ಎಂದು ಕಾರಣ ಹೇಳಿದರು.
ಸರ್ಕಾರಿ ನೌಕರರನ್ನಾಗಿ ಮಾಡಬೇಕೆನ್ನುವ ಬೇಡಿಕೆಯನ್ನು ಈಡೇರಿಸಲು ಸಾಧ್ಯವೇ ಇಲ್ಲ. ಉಳಿದೆಲ್ಲ ಬೇಡಿಕೆಗಳನ್ನು ಆರ್ಥಿಕ ಇತಿಮಿತಿಗಳಲ್ಲಿ ಈಡೇರಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಸಾರಿಗೆ ನೌಕರರ ಮುಷ್ಕರ ಇಂದಿಗೆ ನಾಲ್ಕು ದಿನಕ್ಕೆ ತಲುಪಿದ್ದು, ಸರ್ಕಾರ ಹಾಗೂ ಸಾರಿಗೆ ಸಂಸ್ಥೆ ನೌಕರರು ತಮ್ಮ ಪಟ್ಟು ಸಡಿಲಿಸಿಲ್ಲ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.