ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ | ಸಚಿವ ಸವದಿ ಹೇಳಿಕೆ - Mahanayaka

ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ | ಸಚಿವ ಸವದಿ ಹೇಳಿಕೆ

14/12/2020

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದು, ಈ ಬಗ್ಗೆ ತನಗೆ ಮಾಹಿತಿ ಬಂದಿದೆ ಎಂದು ಹೇಳಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಮೂಲಕ ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ ಬಗ್ಗೆ ಮಾಹಿತಿ ಗೊತ್ತಾಗಿದೆ. ನಾನು ಯಾರ ಬಗ್ಗೆಯೂ ಟೀಕೆ-ಟಿಪ್ಪಣಿ ಮಾಡುವುದಿಲ್ಲ. ರಾಜ್ಯದ ಹಲವೆಡೆ ಸಂಚಾರ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾತ್ರ ಹೇಳಿಕೆ ನೀಡಿದ್ದಾರೆ. ಆದರೆ ಮುಷ್ಕರ ನಿರತ ನೌಕರರಿಂದ ಈ ಬಗ್ಗೆ ಯಾವುದೇ ಮಾಹಿತಿಗಳು ಇನ್ನೂ ಬಂದಿಲ್ಲ. ಇಲ್ಲಿಯವರೆಗೂ ಸರ್ಕಾರ ಸಾರಿಗೆ ನೌಕರರನ್ನು  ಸರ್ಕಾರಿ ನೌಕರರು ಎಂದು ಪರಿಗಣಿಸುವ ಬಗ್ಗೆ  ಯಾವುದೇ ಹೇಳಿಕೆಯನ್ನು ನೀಡಿಲ್ಲ. ಬೆರಳೆಣಿಕೆಯ ಬಸ್ ಗಳನ್ನು ರಸ್ತೆಗಳಿಸಿ, ಸಚಿವರು ಈ ಹೇಳಿಕೆ ನೀಡಿದ್ದಾರೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ