ಸತೀಶ್ ಜಾರಕಿಹೋಳಿ ಹರೇ ಬರೇ ಓದಿದ ವ್ಯಕ್ತಿ: ಸಿಎಂ ಬೊಮ್ಮಾಯಿ
ಉಡುಪಿ: ಸತೀಶ್ ಜಾರಕಿಹೋಳಿ ಹರೇ ಬರೇ ಓದಿದ ವ್ಯಕ್ತಿ. ಯಾವುದೇ ಆಳವಾದ ಅಧ್ಯಯನ ಇಲ್ಲದೆ ಮಾತನಾಡಿದ್ದಾರೆ. ಅಲ್ಪಸಂಖ್ಯಾತ ಮತ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಸತೀಶ್ ಹೇಳಿಕೆಯಿಂದ ಭಾರತದ ಭಾವನೆಗೆ ಧಕ್ಕೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ
ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ಷೋಭೆಭರಿತ ಹೇಳಿಕೆ ಎಂಬೂದು ದೇಶದ್ರೋಹದ ಕೆಲಸ. ಈ ಬಗ್ಗೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಮೌನ ಯಾಕೆ? ನಿಮ್ಮ ಮೌನ ಸತೀಶ್ ಮಾತಿಗೆ ಸಮ್ಮತಿನಾ? ಸತೀಶ್ ಇನ್ನೂ ಸಮರ್ಥನೆ ಮಾಡ್ತಾರೆ ಹುಳಿ ಹಿಂಡುವ ಕೆಲಸ ಮಾಡ್ತಾರೆ ಎಂದರು
ದೇಶದಲ್ಲಿ ಕಾಂಗ್ರೆಸ್ ಅಲ್ಪ ಸ್ಪಲ್ಪ ಉಳಿದಿದೆ. ನೆಪಮಾತ್ರದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜನ ಮೂಲೆಯ ಸ್ಥಾನ ತೋರಿಸ್ತಾರೆ. ಇದೊಂದು ಪೂರ್ವಗ್ರಹ ಹೇಳಿಕೆ ಮತ್ತು ಯೋಜನಾಬದ್ಧವಾದ ಹೇಳಿಕೆ. ಹಿಂದೂ ಭಾವನೆ ವಿಚಾರ ಮನಸ್ಸಿಗೆ ಘಾಸಿಯಾಗುವ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನ ಒಕ್ಕೊರಲಿನಿಂದ ಇದನ್ನು ವಿರೋಧಿಸಬೇಕು ಎಂದು ಅವರು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka