ಸತ್ಯ ಹೇಳಲು ನನಗೆ ಯಾವ ಹಿಂಜರಿಕೆ, ಭಯವೂ ಇಲ್ಲ | ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು - Mahanayaka
10:44 AM Wednesday 12 - February 2025

ಸತ್ಯ ಹೇಳಲು ನನಗೆ ಯಾವ ಹಿಂಜರಿಕೆ, ಭಯವೂ ಇಲ್ಲ | ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

h d kumaraswamy
06/10/2021

ಬೆಂಗಳೂರು: ಆರೆಸ್ಸೆಸ್(RSS) ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(H D Kumaraswamy) ಅವರು ನೀಡಿರುವ ಹೇಳಿಕೆ ಸಂಬಂಧ ಬುಧವಾರ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ, ನಾನು ಯಾವುದೇ ಸಂಘ, ಸಂಸ್ಥೆ ಅಥವಾ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಲ್ಲ, ಹಾಗೆಯೇ ತನಗೆ ಸತ್ಯ ಹೇಳಲು ನನಗೆ ಯಾವ ಹಿಂಜರಿಕೆ, ಭಯ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದೇಶದಲ್ಲಿ ಏನು ನಡೆಯುತ್ತಿದೆ ಎಂಬುದು ಈ ಬಗ್ಗೆ ಜನರಿಗೆ ಅರ್ಥವಾಗುತ್ತಿಲ್ಲ. ಸತ್ಯ ಮುಚ್ಚಿಟ್ಟರೆ ತಮ್ಮ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯ ತಂದುಕೊಟ್ಟ ಮಹಾಪುರುಷರಿಗೆ ಅಪಚಾರ ಮಾಡಿದಂತೆ ಆಗುತ್ತದೆ. ಯಾವತ್ತಿದ್ದರೂ ಜನರಿಗೆ ಸತ್ಯ ಗೊತ್ತಾಗಲೇಬೇಕು. ಸತ್ಯ ಹೇಳಲು ನನಗೆ ಯಾವ ಹಿಂಜರಿಕೆ, ಭಯ ಇಲ್ಲ. ನನ್ನ ಹೇಳಿಕೆ ಯಾರ ಪರವೂ ಇಲ್ಲ ಅಥವಾ ವಿರೋಧವೂ ಇಲ್ಲ. ಸತ್ಯ ಚರ್ಚೆ ಆಗಬೇಕು ಎಂಬುದು ನನ್ನ ಅಭಿಲಾಷೆ. ನಾನು ಸತ್ಯದ ಪರ ಎಂದು ಅವರು ತಮ್ಮ ನಿಲುವನ್ನು ತಿಳಿಸಿದ್ದಾರೆ.

ನಾನು ಯಾವುದೇ ಸಂಘ, ಸಂಸ್ಥೆ ಅಥವಾ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಕೊರೋನಾ ಲಾಕ್ ಡೌನ್ ವೇಳೆಯಲ್ಲಿ ಪುಸ್ತಕ‌ ಓದಿದ್ದೆ. ಹಲವಾರು ಲೇಖಕರು ಬರೆದ ಮಹತ್ವದ ಪುಸ್ತಕಗಳನ್ನು ಓದಿದೆ. ಇತಿಹಾಸದ ಕೆಲ ಅಂಶಗಳ ಬಗ್ಗೆಯೂ ಅಧ್ಯಯನ ಮಾಡಿದೆ. ಆ ಪುಸ್ತಕಗಳಲ್ಲಿರುವ ಕೆಲ ಅಂಶಗಳನ್ನಷ್ಟೆ ನಾನು ಹೇಳಿದ್ದೇನೆಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಆರೆಸ್ಸೆಸ್ ದೇಶವನ್ನು ಮನುಸ್ಮೃತಿ ಯುಗಕ್ಕೆ ತೆಗೆದುಕೊಂಡು ಹೋಗುವ ಅಜೆಂಡಾ ಹೊಂದಿದೆ | ಹೆಚ್.ಡಿ.ಕುಮಾರಸ್ವಾಮಿ

ಮನೆಗೆ 1 ಕಿ.ಮೀ. ದೂರವಿರುವಾಗಲೇ ನಡೆಯಿತು ಅಪಘಾತ | ತಾಯಿ, ಮಗ ಇಬ್ಬರೂ ಸಾವು

ಏಕಾಏಕಿ ಕೈಕೊಟ್ಟ Jio ನೆಟ್ ವರ್ಕ್ |  ಗ್ರಾಹಕರು ಕಂಗಾಲು

ಅಮಾನವೀಯ ಘಟನೆ: ರಾತ್ರೋ ರಾತ್ರಿ ಮನೆಯಲ್ಲಿದ್ದವರನ್ನ ಹೊರದಬ್ಬಿ ಬೀಗ ಜಡಿದ ಬ್ಯಾಂಕ್ ಸಿಬ್ಬಂದಿ!

ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್: LPG ಸಿಲಿಂಡರ್ ಗೆ 15 ರೂಪಾಯಿ ಏರಿಕೆ

ಟಿಎಂಸಿ ಸೇರ್ಪಡೆಗೂ ಮುನ್ನ ಕೇಶಮುಂಡನ ಮಾಡಿ ಆತ್ಮಶುದ್ಧಿ ಮಾಡಿಕೊಂಡ ಬಿಜೆಪಿ ಶಾಸಕ!

ಹಾನಗಲ್, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

 

ಇತ್ತೀಚಿನ ಸುದ್ದಿ