ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿಯಾಗಲಿದ್ದಾರೆಯೇ ಸತೀಶ್ ಜಾರಕಿಹೊಳಿ ಪುತ್ರಿ?

ಮುಂದಿನ ಲೋಕಸಭಾ ಚುನಾವಣೆಗೆ ವಿವಿಧ ಪಕ್ಷಗಳ ಭರದಿಂದ ಸಿದ್ಧತೆ ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಜಾರಕಿಹೊಳಿ ಕುಟುಂಬದಿಂದ ಹೊಸ ಮುಖ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನುವ ವಿಚಾರ ಚರ್ಚೆಗೀಡಾಗುತ್ತಿದೆ.
ಸತೀಶ್ ಜಾರಕಿಹೊಳಿ ಅವರ ಪುತ್ರಿ 25 ವರ್ಷದ ಪ್ರಿಯಾಂಕಾ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರಲು ವೇದಿಕೆ ಸಿದ್ಧಗೊಳ್ಳುತ್ತಿದೆ ಎನ್ನಲಾಗ್ತಿದೆ. ಪಕ್ಷದ ಹೈಕಮಾಂಡ್ ಸಮ್ಮತಿಸಿದ್ರೆ, ಪ್ರಿಯಾಂಕಾ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಸಿದ್ಧವಾಗಿರುವುದಾಗಿ ಸತೀಶ್ ಜಾರಕಿಹೊಳಿ ಹೇಳಿರುವುದಾಗಿ ವರದಿಗಳು ತಿಳಿಸಿವೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಸ್ಪರ್ಧಿಸಿ, ಬಿಜೆಪಿಯ ಮಂಗಳ ಅಂಗಡಿ ವಿರುದ್ಧ ಕಡಿಮೆ ಅಂತರದಲ್ಲಿ ಸೋಲನುಭವಿಸಿದ್ದರು. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ರಾಜ್ಯ ರಾಜಕಾರಣದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಜೊತೆಗೆ ಅವರ ಪುತ್ರಿಯನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರಲು ಚಿಂತನೆ ನಡೆಸಿದ್ದಾರೆನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw