7:59 PM Thursday 23 - October 2025

“ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ”: ತನ್ನ ಹೇಳಿಕೆಗೆ ಸ್ಪಷ್ಟನೆ ನೀಡಿದ ಯತೀಂದ್ರ ಸಿದ್ದರಾಮಯ್ಯ

sathish jarakiholi
23/10/2025

ಬೆಳಗಾವಿ: ರಾಜಕೀಯ ಉತ್ತರಾಧಿಕಾರಿ ಬಗ್ಗೆ ನಾನು ಮಾತನಾಡಿಲ್ಲ ಎಂದು ಎಂಎಲ್‌ ಸಿ ಡಾ. ಯತೀಂದ್ರ ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ನಂತರ ವೈಚಾರಿಕವಾಗಿ ಪ್ರಗತಿಪರ ತತ್ವ, ಸಿದ್ಧಾಂತ ಇರುವ ಸತೀಶ್ ಜಾರಕಿಹೊಳಿ ಜವಾಬ್ದಾರಿ ನಿಭಾಯಿಸುತ್ತಾರೆ ಎನ್ನುವ ಹೇಳಿಕೆಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೈದ್ಧಾಂತಿಕವಾಗಿ ರಾಜಕಾರಣ ಮಾಡುವವರನ್ನ ಲೀಡ್ ಮಾಡಲಿ ಅನ್ನೋ ಉದ್ದೇಶ ಇಟ್ಟುಕೊಂಡು ಹೇಳಿದ್ದೇನೆ. ರಾಜಕೀಯ ಉತ್ತರಾಧಿಕಾರಿ ಬಗ್ಗೆ ನಾನು ಮಾತನಾಡಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಡಾ.ಯತೀಂದ್ರ, 2028ರ ವಿಧಾನಸಭಾ ಚುನಾವಣೆಯಲ್ಲಿ ತಂದೆಯವರು ಸ್ಪರ್ಧಿಸಲ್ಲ ಅಂದಿದ್ದಾರೆ. ಅದು ಆದ ಮೇಲೆ ಜಾತ್ಯತೀತ ಸಿದ್ಧಾಂತ ಇಟ್ಟುಕೊಂಡ ಸಾಕಷ್ಟು ನಾಯಕರಿದ್ದಾರೆ. ಇವರೆಲ್ಲರನ್ನೂ ಸತೀಶ್ ಜಾರಕಿಹೊಳಿ‌ ಮುನ್ನಡೆಸಲಿ ಎಂದರು.

2028ರ ನಂತರ ಆ ರೀತಿ ಲೀಡ್ ಮಾಡೋರು ಬೇಕು. ಸೈದ್ಧಾಂತಿಕ ರಾಜಕಾರಣ ಮಾಡುವವರ ಪೈಕಿ ಸಚಿವ ಸತೀಶ್ ಸಹ ಒಬ್ಬರು. ಆ ರೀತಿ ಸಿದ್ಧಾಂತ ಇಟ್ಟುಕೊಂಡವರಿಗೆ ಸತೀಶ್ ಮಾರ್ಗದರ್ಶನ ಮಾಡಲಿ. ನಾಳೆಯೇ ಕೊನೆ ದಿನ ಅಲ್ಲ, 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಳಿರುವೆ ಎಂದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version