SBI ಎಟಿಎಂ ಕಳ್ಳತನಕ್ಕೆ ಯತ್ನ | ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು
28/04/2021
ಪುತ್ತೂರು: ಎಸ್ ಬಿಐ ಬ್ಯಾಂಕ್ ನ ಎಟಿಎಂನಲ್ಲಿ ಕಳ್ಳತನ ನಡೆಸಲು ಯತ್ನಿಸಿರುವ ಘಟನೆ ವರದಿಯಾಗಿದ್ದು, ಇಂದು ಮುಂಜಾನೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿರುವ ಎಸ್ ಬಿಐ ಬ್ಯಾಂಕ್ ನ ಎಟಿಎಂ ಕಳ್ಳತನ ನಡೆಸಲು ಯತ್ನಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಡಿವೈಎಸ್ ಪಿ ಗಾನಕುಮಾರ್, ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ ಸೇರಿದಂತೆ ಉಪ್ಪಿನಂಗಡಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದು, ಕಳ್ಳರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.