ಎಸ್ಸಿ, ಎಸ್ಟಿ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮ - Mahanayaka

ಎಸ್ಸಿ, ಎಸ್ಟಿ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮ

cm bommai
09/10/2022


Provided by

ಬೆಂಗಳೂರು: ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮ ರಚಿಸಲು ತೀರ್ಮಾನ ಮಾಡಲಾಗಿದೆ ಎಂದರು.

ತಳಸಮುದಾಯಗಳಿಗೆ ಮೀಸಲಾತಿ ಪೂರ್ಣಪ್ರಮಾಣದಲ್ಲಿ ಮುಟ್ಟಿಲ್ಲ ಎಂದು ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿ ಹೇಳಿದ್ದು, ಇವರಿಗೆ ನ್ಯಾಯ ಒದಗಿಸಲು ಕೂಲಂಕಷವಾಗಿ ಕಾನೂನಾತ್ಮಕ ಅಂಶಗಳನ್ನು ತಜ್ಞರು ಪರಿಶೀಲಿಸಿ, ಮುಂದೆ ಕ್ರಮ ತೆಗೆದುಕೊಳ್ಳಬಹುದೆಂದು ಹೇಳಿದ್ದಾರೆ ಎಂದರು.

ಒಳಮೀಸಲಾತಿ ಬಗ್ಗೆ ಅಧ್ಯಯನ ಮಾಡಿರುವ ಸದಾಶಿವ ಆಯೋಗದ ಪ್ರಮುಖ ಅಂಶಗಳನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅದರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲಾ ಜಾತಿಗಳ ಹಿತರಕ್ಷಣೆ ಮಾಡುವ ಸಲುವಾಗಿ ಮತ್ತು ಒಳಮೀಸಲಾತಿಯಿಂದ  ಪರಿಣಾಮ ಬೀರುವ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ತೆಗೆದುಕೊಳ್ಳಲಾಗುವುದು. ಇನ್ನು ಪರಿಶಿಷ್ಟ ಜಾತಿಯಲ್ಲಿರುವ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಇದು ಅಧಿಕೃತವಾಗಿ ಚರ್ಚೆ ಮಾಡಿ ಕೈಗೊಂಡಿರುವ ತೀರ್ಮಾನ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ