6:22 AM Thursday 16 - October 2025

ಮುರುಘಾ ಶ್ರೀ ವಿರುದ್ಧ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲು?

muruga sharanaru shree 2
30/08/2022

ಚಿತ್ರದುರ್ಗ:  ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿರುವ ಮುರುಘಾ ಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯದ ಜೊತೆಗೆ ಪರಿಶಿಷ್ಟ ಜಾತಿ, ಪಂಗಡ ಕಾಯ್ದೆಯಡಿಯೂ  ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಮೈಸೂರಿನ ನಜರ್ ಬಾದ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆಯರ ಪೈಕಿ ಓರ್ವಳು ಬಾಲಕಿ ದಲಿತ ಸಮುದಾಯಕ್ಕೆ ಸೇರಿದ್ದು, ಹೀಗಾಗಿ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದಯಡಿಯಲ್ಲೂ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಒಂದೆಡೆ ಬಂಧನದ ಭೀತಿಯಲ್ಲಿರುವ ಸ್ವಾಮೀಜಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.  ಸೆ.1ಕ್ಕೆ ಈ ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ಶ್ರೀಗಳ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿರುವುದರ ನಡುವೆಯೇ ಪ್ರಭಾವಿ ರಾಜಕಾರಣಿಗಳು ಶ್ರೀಗಳ ಪರ ಬ್ಯಾಟಿಂಗ್ ಮಾಡುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜಕಾರಣಿಗಳು ತನಿಖೆ ಆರಂಭವಾಗುವುದಕ್ಕೂ ಮೊದಲೇ ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿದ್ದು, ಪೊಲೀಸರು ಒತ್ತಡಕ್ಕೆ  ಸಿಲುಕದೇ ನಿಸ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಪೊಲೀಸ್ ವ್ಯವಸ್ಥೆ ಮೇಲಿನ ಜನರ ನಂಬಿಕೆಯನ್ನು ಹುಸಿಗೊಳಿಸಬಾರದು ಎನ್ನುವ ಒತ್ತಾಯಗಳು ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version