ಎಸ್ ಸಿ-ಎಸ್ ಟಿ ಮಕ್ಕಳಲ್ಲಿ ಅಪೌಷ್ಠಿಕತೆ ಹೆಚ್ಚು | ಸಮೀಕ್ಷೆಯಲ್ಲಿ ಬಯಲಾಯ್ತು ಸತ್ಯ! - Mahanayaka

ಎಸ್ ಸಿ-ಎಸ್ ಟಿ ಮಕ್ಕಳಲ್ಲಿ ಅಪೌಷ್ಠಿಕತೆ ಹೆಚ್ಚು | ಸಮೀಕ್ಷೆಯಲ್ಲಿ ಬಯಲಾಯ್ತು ಸತ್ಯ!

29/11/2020

ಬೆಂಗಳೂರು: ರಾಜ್ಯದ ಶೇ.60.7ರಷ್ಟು ಮಕ್ಕಳಲ್ಲಿ ಅಪೌಷ್ಠಿಕತೆ ಕಂಡು ಬಂದಿದ್ದು, ಈ ಪೈಕಿ .  ಶೇ.71.43 ರಷ್ಟು ಎಸ್​ ಸಿ-ಎಸ್​ ಟಿ ಸಮುದಾಯದ  ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿರುವುದು ವರದಿಯಾಗಿದೆ.

ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದ ಸಮೀಕ್ಷೆಯಲ್ಲಿ ಈ ವಿಚಾರ ಬಯಲಾಗಿದೆ.  ಕರ್ನಾಟಕ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಮಕ್ಕಳಲ್ಲಿ ಅಪೌಷ್ಠಿಕತೆ ಪತ್ತೆಯಾಗಿದೆ.

ಗಂಡು ಮಕ್ಕಳಿಗಿಂತ ಹೆಚ್ಚಾಗಿ ಹೆಣ್ಣು ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.  ಶೇ.60.7ರಷ್ಟು ಗಂಡು ಮಕ್ಕಳು ಕಡಿಮೆ ತೂಕ ಹೊಂದಿದ್ದರೆ ಶೇ.68.3ರಷ್ಟು  ಹೆಣ್ಣು ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ ಎನ್ನುವುದು ಬಯಲಾಗಿದೆ.

ಇತ್ತೀಚಿನ ಸುದ್ದಿ