ನಕಲಿ ಜಾತಿ ಪ್ರಮಾಣ ಪತ್ರದ ವಿರುದ್ಧ ಬೆತ್ತಲೆ ಪ್ರತಿಭಟನೆ ನಡೆಸಿದ ಎಸ್ ಸಿ- ಎಸ್ ಟಿ ಯುವಕರು

raypur
18/07/2023

ರಾಯ್ಪುರ : ನಕಲಿ ಜಾತಿ ಪ್ರಮಾಣ ಪತ್ರ ಬಳಸಿ ಸರ್ಕಾರಿ ಉದ್ಯೋಗ ಪಡೆದುಕೊಳ್ಳುತ್ತಿರುವ ವಂಚಕರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಆಕ್ರೋಶ ವ್ಯಕ್ತಪಡಿಸಿ ಛತ್ತೀಸ್ ಗಡದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಂಗಳವಾರ ಈ ಪ್ರತಿಭಟನೆ ತೀವ್ರತೆ ಪಡೆದುಕೊಂಡಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಹೆಚ್ಚಿನ ಸಂಖ್ಯೆಯ ಯುವಕರು ಬೆತ್ತಲೆಯಾಗಿ ಪ್ರತಿಭಟಿಸಿದರು.

ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣದ ಆರೋಪಿಗಳಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದ ಯುವಕರು ವಿಧಾನಸಭೆಯತ್ತ ಬೆತ್ತಲೆ ಮೆರವಣಿಗೆ ನಡೆಸಿದರು. ಈ ವೇಳೆ ಯುವಕರನ್ನು ಪೊಲೀಸರು ಬಂಧಿಸಿದರು.

ಸರ್ಕಾರವು ತನಿಖೆ ನಡೆಸಿದ ನಕಲಿ ಜಾತಿ ಪ್ರಕರಣಗಳಲ್ಲಿ ಕಂಡುಬರುವ ಅಪರಾಧಿಗಳ ವಿರುದ್ಧ ಮೂರು ವರ್ಷಗಳ ನಂತರವೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದಲ್ಲದೇ ನಕಲಿ ಜಾತಿ ಪ್ರಮಾಣಪತ್ರ ಹೊಂದಿರುವವರನ್ನ ಪ್ರಮುಖ ಹುದ್ದೆಗಳಿಗೆ ಬಡ್ತಿ ನೀಡಲಾಗುತ್ತಿದೆ ಸರ್ಕಾರ ಎಸ್ ಸಿ—ಎಸ್ ಟಿಗಳ ಮೇಲೆ ನಡೆಸುತ್ತಿರುವ ಅನ್ಯಾಯದ ವಿರುದ್ಧ ಬೇಸತ್ತ ಸಮುದಾಯದ ಯುವಕರು ಕಠಿಣ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version