ಬ್ರೇಕ್: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ - Mahanayaka
12:56 AM Wednesday 20 - August 2025

ಬ್ರೇಕ್: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ

29/11/2024


Provided by

ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ಸಂಭಲ್ ಜಾಮಾ ಮಸೀದಿಯ ಸಮಿತಿಯು ಹೈಕೋರ್ಟ್‌ ಗೆ ತೆರಳುವವರೆಗೆ ಮಸೀದಿ ಸರ್ವೆ ಮುಂದುವರಿಸದಂತೆ ಸಂಭಲ್ ನಲ್ಲಿರುವ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ಮೊರೆ ಹೋಗುವಂತೆ ಸಂಭಲ್ ನಲ್ಲಿರುವ ಶಾಹಿ ಈದ್ಗಾ ಮಸೀದಿಯ ಆಡಳಿತ ಸಮಿತಿಗೆ ಸುಪ್ರೀಂ ಕೋರ್ಟ್ ಇದೇ ವೇಳೆ ಸೂಚಿಸಿದೆ. ಸಂಭಲ್ ಜಾಮಾ ಮಸೀದಿಯ ಶಾಹಿ ಈದ್ಗಾ ಸಮಿತಿಯು ಹೈಕೋರ್ಟ್‌ ಗೆ ತೆರಳುವವರೆಗೆ ಮಸೀದಿ ಸರ್ವೆ ಪ್ರಕರಣವನ್ನು ಮುಂದುವರಿಸದಂತೆ ಉತ್ತರಪ್ರದೇಶದ ಸಂಭಲ್ ನಲ್ಲಿರುವ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆಯನ್ನು ನೀಡಿದೆ.

ಮಸೀದಿ ಇರುವ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಎಂಬ ಹಿಂದೂ ಅರ್ಜಿದಾರರ ಅರ್ಜಿಯನ್ನು ಪರಿಗಣಿಸಿ ಮಸೀದಿಯ ಸಮೀಕ್ಷೆಗೆ ವಿಚಾರಣಾ ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು.

ಮಸೀದಿ ಈ ಹಿಂದೆ ದೇವಾಲಯವಾಗಿತ್ತು ಎಂದು ಅರ್ಜಿ ಸಲ್ಲಿಕೆಯಾದ ಕೂಡಲೇ ಜಿಲ್ಲಾ ನ್ಯಾಯಾಲಯ ತರಾತುರಿಯಲ್ಲಿ ಸಮೀಕ್ಷೆಗೆ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರು ನವೆಂಬರ್ 19ರಂದು ಸಮೀಕ್ಷೆಗೆ ಆದೇಶಿಸಿ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಸಂಭಾಲ್‌ನ ಶಾಹಿ ಜಾಮಾ ಮಸೀದಿ ಸಮಿತಿ (ಎಸ್‌ಎಸ್‌ಜೆಂಸಿ) ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಮಸೀದಿ ಸಮಿತಿ ತನ್ನ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಕೋರಿತ್ತು. ಅದಕ್ಕೆ ಒಪ್ಪಿದ್ದ ಸುಪ್ರೀಂ ಕೋರ್ಟ್, ಇಂದು ವಿಚಾರಣೆ ನಿಗದಿ ಮಾಡಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ