4:00 AM Saturday 13 - December 2025

ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಬ್ಯಾಂಕ್ ನಲ್ಲಿದೆ ಉದ್ಯೋಗ: ಸಿಗಲಿದೆ ₹55,655 ವೇತನ

scdcc bank
08/07/2024

ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವಂತಹ ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದ್ದು, ನೇಮಕಾತಿ ಸಂಪೂರ್ಣ ವಿವರವನ್ನು ಇಲ್ಲಿ ತಿಳಿದುಕೊಳ್ಳಿ.

SCDCC Bank Recruitment 2024 : 123 ಹುದ್ದೆಗಳ ಭರ್ತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳು ಒಟ್ಟು 123 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅರ್ಹತೆಗಳು ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಶೈಕ್ಷಣಿಕ ಅರ್ಹತೆಯ ವಿವರ :

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವಂತಹ ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅಂಗಿಕೃತ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿದ್ದು ಪದವಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು. ಇದರ ಜೊತೆಗೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.

ವಯೋಮಿತಿ ಅರ್ಹತೆಗಳು : Age limit Details

ಜಿಲ್ಲಾ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಾಯಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹೊಂದಿರಬೇಕಾಗಿದ್ದು, ಗರಿಷ್ಠ ವಯೋಮಿತಿಯನ್ನು ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದ್ದಾರೆ.

* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

* ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.

* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.

ಆಯ್ಕೆ ಆಗುವಂತಹ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನ :

ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 24,910 ರೂಪಾಯಿ ಯಿಂದ ರಿಂದ 55,655 ರೂಪಾಯಿ ಶ್ರೇಣಿಯಲ್ಲಿ ವೇತನ ಸಿಗುತ್ತದೆ.

ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬ ಮಾಹಿತಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರದಲ್ಲಿ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆದು ನೇಮಕಾತಿ ಮಾಡಿಕೊಳ್ಳಲಾಗುವುದು.

 ಅರ್ಜಿ ಶುಲ್ಕ:

* ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳು 590 4ರೂ. ಅರ್ಜಿ ಸುಲ್ಕ ಪಾವತಿಸಬೇಕು.

* ಇವರನ್ನು ಹೊರತುಪಡಿಸಿ ಉಳಿದ ವರ್ಗದ ಅಭ್ಯರ್ಥಿಗಳು 1180ರೂ. ಅರ್ಜಿ ಶುಲ್ಕ ಪಾವತಿಸಬೇಕು.

ನೇಮಕಾತಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 18, 2024 ಕೊನೆಯ ದಿನಾಂಕವಾಗಿರುವುದರಿಂದ ಅಭ್ಯರ್ಥಿಗಳು ಮುಂಚಿತವಾಗಿಯೇ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧಿಕೃತ ಜಾಲತಾಣದ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಉದ್ಯೋಗ ಪಡೆಯಿರಿ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಒತ್ತಿ : www.scdccbank.com


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version