ಕುಸಿದು ಬಿದ್ದ ಶಾಲೆಯ ಕಾಂಕ್ರೀಟ್ ಛಾವಣಿ: ಜಾತಿ ಗಣತಿ ರಜೆಯಿಂದಾಗಿ ವಿದ್ಯಾರ್ಥಿಗಳ ಜೀವ ಉಳಿಯಿತು

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದರ ಕಾಂಕ್ರೀಟ್ ಛಾವಣಿ ಕುಸಿದು ಬಿದ್ದಿದ್ದು, ಜಾತಿ ಗಣತಿ ನಿಮಿತ್ತ ಶಾಲೆಗೆ ರಜೆ ಇದ್ದಿದ್ದರಿಂದ ಯಾರಿಗೂ ತೊಂದರೆ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಸೋಮವಾರ ಮಧ್ಯಾಹ್ನ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.
ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಕೋಣೆಯೊಳಗಿನ ಎಲ್ಲಾ ಪೀಠೋಪಕರಣಗಳು ನಾಶವಾಗಿವೆ ಮತ್ತು ಕಿಟಕಿಗಳು ಪುಡಿಪುಡಿಯಾಗಿವೆ.
50 ವರ್ಷ ಹಳೆಯದಾಗಿರುವ ಈ ಶಾಲಾ ಕಟ್ಟಡದಲ್ಲಿ ಕನ್ನಡ, ಉರ್ದು ಮತ್ತು ಮರಾಠಿ ಮಾಧ್ಯಮ ತರಗತಿಗಳನ್ನು ನಡೆಸಲಾಗುತ್ತಿತ್ತು. ಇಲ್ಲಿ ನಿತ್ಯ ನೂರಾರು ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತದೆ. ಆದರೆ ಜಾತಿ ಗಣತಿ ಹಿನ್ನೆಲೆಯಲ್ಲಿ ರಜೆ ನೀಡಲಾಗಿದ್ದು, ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD