ಶಾಲೆಗಳಿಗೆ ರಜೆ ಮತ್ತಷ್ಟು ದಿನ ಮುಂದುವರಿಕೆ: ಸಮೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದಿಂದ ನಿರ್ಧಾರ

school
07/10/2025

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಹಿನ್ನೆಲೆ ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ ಘೋಷಿಸಲಾಗಿದೆ.

ಸಮೀಕ್ಷೆಯ ಪ್ರಗತಿ ಸಂಬಂಧ ಮಂಗಳವಾರ ವಿಧಾನ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಈ ಮಾಹಿತಿ ನೀಡಿದ್ದಾರೆ.

ಸೆ.2ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಆರಂಭಗೊಂಡಿದೆ. ಸಮೀಕ್ಷೆ ಇಂದು ಮುಗಿಯಬೇಕಿತ್ತು, ಆದ್ರೆ ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ಕೊಪ್ಪಳದಲ್ಲಿ ಶೇ.97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.67ರಷ್ಟು ಆಗಿದೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚೆ ನಡೆಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಪುಟ್ಟಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದು, ಈ ಮನವಿಯನ್ನು ಪುರಸ್ಕರಿಸಿ ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ ಅಂತ ಸಿಎಂ ತಿಳಿಸಿದರು.

ಇನ್ನೂ ಅ.12ರಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ಇರುವುದರಿಂದ ಸಮೀಕ್ಷೆ ಕಾರ್ಯಗಳಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯಿತಿ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version