ಮಗುವಿಗೆ ಕುಕ್ಕಿದ ಕೋಳಿ:  ಶಾಲೆಗೆ ಬೀಗಜಡಿದು ಪಾಲಕರಿಂದ ಪ್ರತಿಭಟನೆ - Mahanayaka
12:52 AM Saturday 7 - February 2026

ಮಗುವಿಗೆ ಕುಕ್ಕಿದ ಕೋಳಿ:  ಶಾಲೆಗೆ ಬೀಗಜಡಿದು ಪಾಲಕರಿಂದ ಪ್ರತಿಭಟನೆ

protest
24/11/2023

ಚಾಮರಾಜನಗರ: ಶಾಲೆಗೆ ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದೇ ಕೋಳಿಯೊಂದು ಬಾಲಕಿಯನ್ನು ಕುಕ್ಕಿದ ಘಟನೆ ಹನೂರು ತಾಲೂಕಿನ ಪೆದ್ದನಪಾಳ್ಯ ಎಂಬ ಗ್ರಾಮದಲ್ಲಿ ನಡೆದಿದ್ದು ಪಾಲಕರು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

ಗುರುವಾರ ಪೆದ್ದನ ಪಾಳ್ಯ ಶಾಲೆಯಲ್ಲಿ ಒಂದನೇ ತರಗತಿ ಬಾಲಕಿಗೆ ಕೋಳಿ ಕಚ್ಚಿ ಗಾಯಗೊಳಿಸಿದ್ದು ಗುರುವಾರದಂದೆ ಶಾಲೆಗೆ ಬೀಗ ಜಡಿದು ಮಕ್ಕಳನ್ನು ಪಾಲಕರು ಮನೆಗೆ ಕರೆದೊಯ್ದಿದ್ದರು. ಇಂದು ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸದೇ ಪಾಲಕರು ಪ್ರತಿಭಟನೆ ನಡೆಸಿ ಶಿಕ್ಷಣ ಇಲಾಖೆ ವಿರುದ್ಧ ಪ್ರತಿಭಟಿಸಿ ಅಕ್ರೋಶ ಹೊರಹಾಕುತ್ತಿದ್ದಾರೆ.

ಶಾಲೆಯ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ವಿನಾಕಾರಣ  ಹಸು ಕರುಗಳನ್ನು ಕಟ್ಟು ತ್ತಿದ್ದು ಜೊತೆಗೆ ಕೋಳಿಗಳನ್ನು ಮೇಯಲು ಬಿಡುತ್ತಿರುವ ಪರಿಣಾಮ ಈ ಘಟನೆ ನಡೆದಿದ್ದು ಇಲಾಖೆ ಸರಿಯಾದ ರೀತಿ ವ್ಯವಸ್ಥೆ ಮಾಡಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ.

ಸದ್ಯ, ಅಧಿಕಾರಿಗಳು ಇಂದು ಶಾಲೆಗೆ ಭೇಟಿ ಕೊಟ್ಟು ಪಾಲಕರ ಮನವೊಲಿಸುವ ಪಾಲಕರು ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ