ದಕ್ಷಿಣ ಕನ್ನಡ: ಭಾರೀ ಮಳೆ ಹಿನ್ನೆಲೆ ಜುಲೈ 31ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ - Mahanayaka

ದಕ್ಷಿಣ ಕನ್ನಡ: ಭಾರೀ ಮಳೆ ಹಿನ್ನೆಲೆ ಜುಲೈ 31ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ

mullai mugilan
30/07/2024

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 31ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Provided by

ಜಿಲ್ಲಾಡಳಿತ ನೀಡಿದ ಸೂಚನೆಗಳನ್ನು ಪಾಲಿಸಿ:

ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ, ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತ ವಹಿಸಿ.

ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಿ.

ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿ ಇದಕ್ಕೆ ಸಂಬಂಧಿಸಿದ ವಿವರ ಇಲ್ಲಿ ನೀಡಲಾಗಿದೆ.

ತುರ್ತು ಸೇವೆಗೆ 24*7 ಕಂಟ್ರೋಲ್ ರೂಂ: 1077/2442590

ಮಂಗಳೂರು ತಾಲೂಕು: 0824–2220587
ಉಳ್ಳಾಲ ತಾಲೂಕು: 0824–2204424
ಬಂಟ್ವಾಳ ತಾಲೂಕು – 08255-232500
ಪುತ್ತೂರು ತಾಲೂಕು – 02851-230349
ಬೆಳ್ತಂಗಡಿ ತಾಲೂಕು – 08256-232047
ಸುಳ್ಯ ತಾಲೂಕು – 08257- 231231
ಮೂಡಬಿದ್ರೆ ತಾಲೂಕು – 08258 – 238100
ಮುಲ್ಕಿ ತಾಲೂಕು – 0824 — 2294496

ಇತ್ತೀಚಿನ ಸುದ್ದಿ