10:50 AM Saturday 23 - August 2025

ಅಮೇಥಿಯಲ್ಲಿ ಶಾಲಾ ಶಿಕ್ಷಕ, ಪತ್ನಿ, ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಕೊಂದ ಅಪರಿಚಿತ ವ್ಯಕ್ತಿಗಳು

03/10/2024

ಶಾಲಾ ಶಿಕ್ಷಕ, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಶಿಕ್ಷಕರ ಮನೆಗೆ ನುಗ್ಗಿ, ಎಲ್ಲಾ ಸದಸ್ಯರ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಮೃತರನ್ನು ಸುನಿಲ್ ಕುಮಾರ್, ಅವರ ಪತ್ನಿ ಪೂನಂ ಮತ್ತು ಅವರ 5 ಮತ್ತು 2 ವರ್ಷದ ಇಬ್ಬರು ಹೆಣ್ಣುಮಕ್ಕಳು ಎಂದು ಗುರುತಿಸಲಾಗಿದ್ದು, ಅಹೋರ್ವಾ ಭವಾನಿ ಕ್ರಾಸಿಂಗ್ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಸ್ಥಳದಲ್ಲಿ ದರೋಡೆಯ ಯಾವುದೇ ಕುರುಹು ಕಂಡುಬಂದಿಲ್ಲ. ಮತ್ತು ಅಪರಾಧದ ಹಿಂದಿನ ಉದ್ದೇಶವು ಅಸ್ಪಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುನಿಲ್ ಭಾಗಿಯಾಗಿರುವ ಕಾನೂನು ವಿವಾದ ಸೇರಿದಂತೆ ಎಲ್ಲಾ ಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಕುಮಾರ್ ಸಿಂಗ್ ಹೇಳಿದ್ದಾರೆ.

ಆಗಸ್ಟ್ ೧೮ ರಂದು ಪೂನಂ ಒಂದು ಕೇಸನ್ನು ದಾಖಲಿಸಿದ್ದರು.. ಚಂದನ್ ವರ್ಮಾ ಎಂಬಾತನ ವಿರುದ್ಧ ಕಿರುಕುಳ, ಹಲ್ಲೆ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಎಸ್ ಪಿ ಅನೂಪ್ ಸಿಂಗ್ ಅವರ ಪ್ರಕಾರ, ಈ ಹಿಂದೆ ಎಸ್ ಸಿ/ಎಸ್ ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದವರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ

Exit mobile version