ಎಸ್.ಡಿ.ಪಿ.ಐ. ದೇಶದ್ರೋಹಿ ಸಂಸ್ಥೆ, ಅವರಿಂದ ಮೆಚ್ಚುಗೆ ಬಯಸುವುದಿಲ್ಲ: ಸಿಎಂ ಬೊಮ್ಮಾಯಿ - Mahanayaka
3:26 AM Thursday 11 - September 2025

ಎಸ್.ಡಿ.ಪಿ.ಐ. ದೇಶದ್ರೋಹಿ ಸಂಸ್ಥೆ, ಅವರಿಂದ ಮೆಚ್ಚುಗೆ ಬಯಸುವುದಿಲ್ಲ: ಸಿಎಂ ಬೊಮ್ಮಾಯಿ

cm bommai
28/03/2023

ಬೆಳಗಾವಿ:ಎಸ್.ಡಿ.ಪಿ.ಐ ಹೇಳಿಕೆಗಳನ್ನು ಗಮನಿಸಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು  ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.


Provided by

ಎಸ್.ಡಿ.ಪಿ.ಐ ಅಲ್ಪಸಂಖ್ಯಾತರ ವಿರೋಧಿಯಾಗಿರುವ ಒಂದು ದೇಶದ್ರೋಹಿ ಸಂಸ್ಥೆ .  ಅವರಿಂದ ನಾವು ಮೆಚ್ಚುಗೆ ಬಯಸುವುದೂ ಇಲ್ಲ. ಅವರು ಸದಾ ನಮ್ಮ ಚಿಂತನೆ, ವಿಚಾರಗಳಿಗೆ ವಿರುದ್ಧ ಇದ್ದಾರೆ. ಅದಕ್ಕೆ ನಾವು ಸೊಪ್ಪು ಹಾಕುವುದಿಲ್ಲ ಎಂದು ಅವರು ಹೇಳಿದರು.

ಬಿಜೆಪಿ ಪಟ್ಟಿ ಬಿಡುಗಡೆ ವಿಚಾರವಾಗಿ  ಇದೇ ವೇಳೆ ಪ್ರತಿಕ್ರಿಯಿಸಿದ  ಅವರು, ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ಪಟ್ಟಿ ಬಿಜೆಪಿ ಪಟ್ಟಿ ಬಹುತೇಕವಾಗಿ ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂದರು.

ಕಾಂಗ್ರೆಸ್ ದಿವಾಳಿಯಾಗಿದೆ:

ಕಳೆದ  2-3 ದಿನಗಳಿಂದ ನಮ್ಮ ಶಾಸಕರಿಗೆ ಫೋನ್ ಮಾಡಿ ಟಿಕೆಟ್ ಕೊಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಬಳಿ ಸರಿಯಾದ ಅಭ್ಯರ್ಥಿ ಇಲ್ಲದೆ ಹತಾಶರಾಗಿದ್ದಾರೆ. ಹಾಗಾಗಿ ನಮ್ಮ ಪಕ್ಷದವರಿಗೆ ಫೋನ್ ಮಾಡುತ್ತಿದ್ದಾರೆ.  ಕಾಂಗ್ರೆಸ್ ದಿವಾಲಿಯಾಗಿದೆ ಎಂದು ಇದರಿಂದಾಗಿ ಸ್ಪಷ್ಟವಾಗುತ್ತದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ