ಎಸ್ ಡಿಪಿಐ ಬ್ಯಾನರ್ ಹರಿದ ದುಷ್ಕರ್ಮಿಗಳು! - Mahanayaka

ಎಸ್ ಡಿಪಿಐ ಬ್ಯಾನರ್ ಹರಿದ ದುಷ್ಕರ್ಮಿಗಳು!

sdpi
30/10/2022

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಶ್ರೀ ನಾರಾಯಣ ಗುರು ವೃತ್ತದ ಬಳಿ ಎಸ್ ಡಿ ಪಿ ಐ ವತಿಯಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯಗಳನ್ನು ಕೋರಿ ಹಾಕಿದ್ದ ಬ್ಯಾನರನ್ನು ದುಷ್ಕರ್ಮಿಗಳು ಹರಿದಿದ್ದಾರೆ.

ನಿನ್ನೆ ರಾತ್ರಿ ಹಾಕಲಾಗಿದ್ದ ಈ ಫ್ಲೆಕ್ಸ್ ನಲ್ಲಿ, ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಎಂದು ಉಲ್ಲೇಖವಾಗಿತ್ತು.

ಕನ್ನಡ ರಾಜ್ಯೋತ್ಸವದ ಫ್ಲೆಕ್ಸ್ ಹಾಕುವುದು ಕೂಡ ಇಲ್ಲಿನ ಕೆಲವರಿಗೆ ಸಹಿಸಲಾಗುತ್ತಿಲ್ಲ. ಇಂತಹ ಕನ್ನಡ ವಿರೋಧಿಗಳನ್ನು ಶೀಘ್ರ ಪತ್ತೆ ಹಚ್ಚಿ ಬಂಧಿಸಬೇಕೆಂದು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಆಗ್ರಹಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ