ಸುರತ್ಕಲ್: ಎಸ್.ಡಿ.ಪಿ.ಐ.ಯಿಂದ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಮಾವೇಶ - Mahanayaka
1:56 AM Saturday 18 - October 2025

ಸುರತ್ಕಲ್: ಎಸ್.ಡಿ.ಪಿ.ಐ.ಯಿಂದ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಮಾವೇಶ

sdpi
09/11/2022

ಸುರತ್ಕಲ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವ ಕಾರ್ಯಕರ್ತರ ಸಭೆಯು ಚೊಕ್ಕಬೆಟ್ಟು ಎಂ ಜೆ ಎಂ ಹಾಲ್ ನಲ್ಲಿ ನಡೆಯಿತು.


Provided by

ಸಭಾಧ್ಯಕ್ಷತೆಯನ್ನು ಕ್ಷೇತ್ರ ಸಮಿತಿಯ ಅಧ್ಯಕ್ಷ ಯಾಸೀನ್ ಅರ್ಕುಲ ವಹಿಸಿ ಪ್ರಾಸ್ತಾವಿಕವಾಗಿ ಮಾತಾಡಿದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ. ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಹಾಗೂ ಜಮಾಲ್ ಜೋಕಟ್ಟೆ  ಕಾರ್ಯಕರ್ತರನ್ನು ಉದ್ದೇಶಿಸಿ ಪಕ್ಷದ ಮುಂದಿನ  ವಿಧಾನಸಭಾ ಚುನಾವಣಾ ನಡೆಯ ಬಗ್ಗೆ ಮಾತನಾಡಿದರು.

ಕ್ಷೇತ್ರ ಸಮಿತಿ ಸದಸ್ಯರಾದ ಅಝರ್ ಚೊಕ್ಕಬೆಟ್ಟು, ನೂರುಲ್ಲ ಕುಳಾಯಿ, ನೌಶಾದ್ ಚೊಕ್ಕಬೆಟ್ಟು,  ಕಾರ್ಪೋರೇಟರ್ ಶಂಶಾದ್ ಅಬೂಬಕ್ಕರ್, ಬ್ಲಾಕ್ ಅಧ್ಯಕ್ಷ ಸಲಾಂ ಕಾನ  ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಕಾರ್ಯಕ್ರಮದಲ್ಲಿ ನೂರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ