‘ಹಿಂದೂ ರಾಷ್ಟ್ರ’ ಜಾಗೃತಿ ಸಭೆ ವಿರುದ್ಧ ದೂರು ದಾಖಲಿಸಿದ ಎಸ್ ಡಿಪಿಐ - Mahanayaka
10:58 AM Tuesday 11 - November 2025

‘ಹಿಂದೂ ರಾಷ್ಟ್ರ’ ಜಾಗೃತಿ ಸಭೆ ವಿರುದ್ಧ ದೂರು ದಾಖಲಿಸಿದ ಎಸ್ ಡಿಪಿಐ

sdpi
07/03/2023

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುರ ಶ್ರೀರಾಮ ಭಜನಾ ಮಂದಿರದಲ್ಲಿ ಮಾರ್ಚ್ 5ರಂದು ನಡೆದ  “ಹಿಂದೂ ರಾಷ್ಟ್ರ ಜಾಗೃತಿ ಸಭೆ” ಕಾರ್ಯಕ್ರಮದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ SDPI ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ದೂರು ದಾಖಲಿಸಿದರು.

ಸಂವಿಧಾನ ಮತ್ತು ರಾಷ್ಟ್ರ ವಿರೋಧಿ ಅಜೆಂಡಾವನ್ನು ಹೊಂದಿರುವ, ಒಂದು ಧರ್ಮದ ವಿರುದ್ಧ ಇನ್ನೊಂದು ಧರ್ಮವನ್ನು ಎತ್ತಿ ಕಟ್ಟಿ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುವ ಈ ಕಾರ್ಯಕ್ರಮಕ್ಕೆ ನೇತೃತ್ವವನ್ನು ನೀಡಿದವರು, ಆಯೋಜಕರು ಮತ್ತು ಸನಾತನ ಸಂಸ್ಥೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ಎಸ್‌ ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ, ಕಾರ್ಯದರ್ಶಿಗಳಾದ ನಿಸಾರ್ ಕುದ್ರಡ್ಕ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ