ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ: ಕರ್ನಾಟಕದಲ್ಲಿ ಐವರು ವಿದ್ಯಾರ್ಥಿಗಳು ಆತ್ಮಹತ್ಯೆ - Mahanayaka

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ: ಕರ್ನಾಟಕದಲ್ಲಿ ಐವರು ವಿದ್ಯಾರ್ಥಿಗಳು ಆತ್ಮಹತ್ಯೆ

exam results
09/04/2025


Provided by

ಬೆಂಗಳೂರು: ಪ್ರತಿಬಾರಿಯೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬರುತ್ತಿದ್ದಂತೆಯೇ ಸಾಧಕರ ಪಟ್ಟಿ ನೋಡಿ ಸಂಭ್ರಮಿಸುವ ಸಂದರ್ಭದಲ್ಲೇ  ಪರೀಕ್ಷೆ ಫಲಿತಾಂಶದಿಂದ ನೊಂದು ಸಾವಿಗೀಡಾಗುವ ವಿದ್ಯಾರ್ಥಿಗಳ ಪಟ್ಟಿ ನೋಡುವುದು ಸಂಕಟ ಉಂಟು ಮಾಡುತ್ತದೆ.  ಕೆಲವು ವಿದ್ಯಾರ್ಥಿಗಳು ತಾವು ನಿರೀಕ್ಷಿಸಿದ ಅಂಕ ಬರಲಿಲ್ಲಿ ಎಂದು ನೊಂದುಕೊಂಡರೆ, ಇನ್ನು ಕೆಲವು ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿರುವ ನೋವಿನಿಂದ ಆತ್ಮಹತ್ಯೆಗೆ ಶರಣಾಗುತ್ತಾರೆ.

ಈ ಬಾರಿ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಐವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೈಸೂರು ಜಿಲ್ಲೆಯ ಒಂಟಿಕೊಪ್ಪಲ್ಲಿನ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮತ್ತೊಂದೆಡೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಅಗಸನೂರು ಎಂಬಲ್ಲಿ ವಿಜಯಲಕ್ಷ್ಮಿ ಸಿರಗುಪ್ಪದ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದ ವಿಷಯ ತಿಳಿದು ದಾವಣಗೆರೆ ಖಾಸಗಿ ಕಾಲೇಜಿನಲ್ಲಿ ವಿಜ್ಞಾನ ವಿಷಯದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಕೃಪಾ ಎಂಬ ವಿದ್ಯಾರ್ಥಿನಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹಾವೇರಿಯ ಹಂಸಬಾವಿ ಠಾಣಾ ವ್ಯಾಪ್ತಿಯ ಪಿಯುಸಿ ವಿದ್ಯಾರ್ಥಿ ಕಾವ್ಯ ಬಸಪ್ಪ ಲಮಾಣಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವುದಕ್ಕೂ ಕೆಲವೇ ಗಂಟೆಗಳ ಮುನ್ನ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಿಂದ ವಿದ್ಯಾರ್ಥಿನಿ ಈ ರೀತಿ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

ಪರೀಕ್ಷಾ ಫಲಿತಾಂಶದ ದಿನ ಪೋಷಕರು ತಮ್ಮ ಮಕ್ಕಳಿಗೆ ಧೈರ್ಯ ತುಂಬಬೇಕು. ಸಾಧ್ಯವಾದಷ್ಟು ಮಕ್ಕಳ ಬಗ್ಗೆ  ಹೆಚ್ಚಿನ ಕಾಳಜಿ ವಹಿಸಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ