ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ  ಹಾಲಿ ಸಚಿವರ ಮಕ್ಕಳು ಇವರೆ ನೋಡಿ…

congress
20/03/2024

ಬೆಂಗಳೂರು: ಲೋಕಸಭಾ ಚುನಾವಣಾ ಕಣ ಕ್ಷಣದಿಂದ ಕ್ಷಣಕ್ಕೆ ಬಿಸಿಯೇರುತ್ತಿದೆ. ಅತ್ತ ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ಪಕ್ಷವನ್ನು ಗೆಲ್ಲಿಸಬೇಕು ಎಂದು ನಿರಂತರ ಪ್ರಯತ್ನಗಳನ್ನು ಹಾಕ್ತಾ ಇದ್ರೆ ಇತ್ತ ಎಲ್ಲ ಪಕ್ಷಗಳ ರಾಜಕಾರಣಿಗಳು ತಮ್ಮ ಮಕ್ಕಳಿಗೆ ಟಿಕೆಟ್‌ ಕೊಡಿಸುವ ವಿಚಾರದಲಿ ಬ್ಯುಝಿಯಾಗಿದ್ದಾರೆ.

ಈ ಪೈಕಿ ಹಾಲಿ ಸಚಿವರು ಕೂಡ ತಮ್ಮ ಮಕ್ಕಳಿಗೆ ಟಿಕೆಟ್‌ ಕೊಡಿಸುವ ವಿಚಾರದಲ್ಲಿ ಬ್ಯುಸಿಯಾಗಿದ್ದಾರೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತಮ್ಮ ಪುತ್ರಿ ಸೌಮ್ಯಾ ರೆಡ್ಡಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಟಿಕೆಟ್‌ ನೀಡಲು ಪಟ್ಟು ಹಿಡಿದಿದ್ದಾರೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ‌ಅವರಿಗೆ ಚಿಕ್ಕೋಡಿ ಕ್ಷೇತ್ರದಿಂದ ಟಿಕೆಟ್‌ ಕೊಡಿಸಲು ಪ್ರಯತ್ನ ಮುಂದುವರಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ  ಪುತ್ರ ಮೃಣಾಲ್ ಗೆ ಬೆಳಗಾವಿ ಕ್ಷೇತ್ರದಿಂದ ಟಿಕೆಟ್‌ ಕೊಡಿಸಲು ಸತತ ಪ್ರಯತ್ನ ನಡೆಸುತ್ತಿದ್ದಾರೆ.

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ  ಪುತ್ರಿ ಸಂಯುಕ್ತಾಗೆ ಬಾಗಲಕೋಟೆ ಕ್ಷೇತ್ರದಿಂದ ಟಿಕೆಟ್‌ ಕೊಡಿಸಲು ಮುಂದಾಗಿದ್ದಾರೆ.

ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ತಮ್ಮ  ಪುತ್ರ ಸಾಗರ್ ಖಂಡ್ರೆಗೆ ಬೀದರ್‌ ಕ್ಷೇತ್ರದಿಂದ ಟಿಕೆಟ್‌ ಕೊಡಿಸಲು ಬಹುತೇಕ ಯಶಸ್ವಿಯಾಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version