2:17 AM Thursday 23 - October 2025

ನಮೋ ಬರ್ತ್ ಡೇ: ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್ ರಿಂದ ಪ್ರಧಾನಿಗೆ ಶುಭಾಶಯ

17/09/2023

ರಾಜಸ್ಥಾನದ ಪ್ರಿಯಕರನಿಗಾಗಿ ಪಾಕಿಸ್ತಾನದ ಕರಾಚಿಯಿಂದ ಭಾರತಕ್ಕೆ ಬಂದಿರುವ ಸೀಮಾ ಹೈದರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಕೇಕ್‌ ಕತ್ತರಿಸುವ ಮೂಲಕ ಆಚರಿಸಿ ಶುಭ ಕೋರಿದ್ದಾರೆ.

ನೇಪಾಳದ ಮೂಲಕ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ ಸೀಮಾ ಹೈದರ್, ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮೋದಿ ಅವರ ಭಾವಚಿತ್ರವನ್ನಿಟ್ಟು ಅದರ ಸುತ್ತಲೂ ಬಲೂನಿನಿಂದ ಅಲಂಕರಿಸಿದ್ದಾರೆ. ಅಷ್ಟೇ ಅಲ್ಲ, ತನ್ನ ಪ್ರಿಯಕರ ಸಚಿನ್‌ ಹಾಗೂ ನಾಲ್ವರು ಮಕ್ಕಳೊಂದಿಗೆ ಕೇಕ್‌ ಕತ್ತರಿಸಿ ಮೋದಿ ಬರ್ತ್‌ಡೇ ಆಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಭಾರತಕ್ಕೆ ಕೀರ್ತಿ ತಂದಿದ್ದಾರೆ ಎಂದಿರುವ ಸೀಮಾ ಹೈದರ್ ಹಿಂದೂಸ್ತಾನ್ ಜಿಂದಾಬಾದ್ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.

ಇತ್ತೀಚಿನ ಸುದ್ದಿ

Exit mobile version