ಭೀಮವಾದ ದಲಿತ ಸಂಘರ್ಷ ಸಮಿತಿ: ಪದಾಧಿಕಾರಿಗಳ ಆಯ್ಕೆ
ಬಳ್ಳಾರಿ: ಭೀಮವಾದ ದಲಿತ ಸಂಘರ್ಷ ಸಮಿತಿ ಬಳ್ಳಾರಿ ಜಿಲ್ಲಾ ಸಮಿತಿ ರಚನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಗುರುವಾರ ಬೆಳಗ್ಗೆ 11ರಂದು ನಗರದ ಅಂಬೇಡ್ಕರ್ ಭವನದಲ್ಲಿ (ಮೊದಲನೇ ಗೇಟ್) ಹೊಸಪೇಟೆ ರಸ್ತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಉದ್ಘಾಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕರಾದ ಸಂಜೀವ್ ಕಂಬಳೆ, ಯಮುನಪ್ಪ ಗುಣದಾಳರವರು ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ ಆಶಯದಂತೆ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕಿನ, ಗ್ರಾಮಗಳಲ್ಲಿರುವ ದಲಿತ, ಹಿಂದುಳಿದ ಅಲ್ಪಸಂಖ್ಯಾತರು ಸಂವಿಧಾನಾತ್ಮಕವಾದ ಹಕ್ಕುಗಳನ್ನು ಪಡೆಯಲು ನಿರಂತರ ಹೋರಾಟ ನಡೆಸಬೇಕು, ಯುವಕರನ್ನು ಸಂಘಟಿಸುವ ಉದ್ದೇಶದಿಂದ ಇಂದು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದರು.
ಆಯ್ಕೆಯಾದ ಪದಾಧಿಕಾರಿಗಳು: ಜಿಲ್ಲಾ ಸಂಚಾಲಕರಾಗಿ ಗಾದಿಲಿಂಗ ಬಿ. ಗೋನಾಳ್, ಜಿಲ್ಲಾ ಸಂಘಟನಾ ಸಂಚಾಲಕರಾಗಿ ಪ್ರಸಾದ್, ಗಿರೀಶ್, ರಾಜ್ ಹಾಗೂ ಜಿಲ್ಲಾ ಖಜಾಂಚಿಯಾಗಿ ಜಯರಾಮ ಇವರುಗಳನ್ನು ರಾಜ್ಯ ಸಂಚಾಲಕ ಬಿ.ಎನ್.ವೆಂಕಟೇಶ್ ರವರ ಆದೇಶ ಮೇರೆಗೆ ನೇಮಕ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಭೀಮವಾದ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಾದ ಸಿದ್ದಾರ್ಥ ಸಿಂಗ್ ರವರು, ರಾಜ್ಯ ಸಂಘಟನಾ ಸಂಚಾಲಕರಾದ ಸಂಜೀವ್ ಕಂಬಳೆ, ಯಮುನಪ್ಪ ಗುಣದಾಳ, ರಾಜ್ಯ ಮಹಿಳಾ ಒಕ್ಕೂಟದ ಸದಸ್ಯೆ ಈರಮ್ಮ ಬಳ್ಳಾರಿ, ಆಯ್ಕೆ ಕಾರ್ಯಕ್ರಮದಲ್ಲಿ ನಾಡಿನ, ಜಿಲ್ಲೆಯ ನಾನಾ ಬರಹಗಾರರು. ಚಿಂತಕರು, ಸಾಹಿತಿಗಳು, ಹೋರಾಟಗಾರರು, ಕಲಾವಿದರು. ವಿಚಾರವಾದಿಗಳು, ಮಹಿಳೆಯರು, ವಿದ್ಯಾರ್ಥಿಗಳು ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಸಂಘಟನಾ ಸಂಚಾಲಕ ಶ್ರೀನಿವಾಸಲು ಜೆ.ಎಸ್.ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth