5:51 AM Wednesday 27 - August 2025

ಮೂರು ಹೊಸ ಉಪ ಮುಖ್ಯಮಂತ್ರಿಗಳ ಆಯ್ಕೆ ಗೊಂದಲ: ಕೆ.ಎನ್.ರಾಜಣ್ಣ ಹೇಳಿಕೆಗೆ ಟಿ.ಬಿ.ಜಯಚಂದ್ರ  ಪ್ರತಿಕ್ರಿಯೆ

t b jayachandra
17/09/2023

ಬೆಂಗಳೂರು: ಮೂರು ಉಪ ಮುಖ್ಯಮಂತ್ರಿಗಳ ಆಯ್ಕೆಯ ಬಗ್ಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ಉದ್ಭವಿಸಿರುವ ಗೊಂದಲಕ್ಕೆ  ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಹುದ್ದೆಯು ಸಾಂವಿಧಾನಿಕ ಹುದ್ದೆ ಅಲ್ಲ. ಅದಕ್ಕೆ ಹೆಚ್ಚು ಮಹತ್ವ ಕೊಡಬಾರದು ಎಂದು  ಅವರು ಅಭಿಪ್ರಾಯ ಪಟ್ಟಿದ್ದಾರೆ.

ಡಿಸಿಎಂ ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು. ಏಕೆಂದರೆ ಅದು ಸಾಂವಿಧಾನಿಕ ಹುದ್ದೆ ಅಲ್ಲ. ಸರ್ಕಾರ ಆಗಿ ನಾವು ನೋಡಬೇಕಾದ ಕೆಲಸ ತುಂಬಾ ಇದೆ. ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಬೇಕು. ಹೀಗಾಗಿ ಅದಕ್ಕೆ ಹೇಗೆ ಹಣ ಸಂಗ್ರಹ ಮಾಡಬೇಕು ಅನ್ನೋದರ ಬಗ್ಗೆ ಗಮನಹರಿಸಬೇಕು. ಗ್ಯಾರಂಟಿ ಯೋಜನೆ ಜೊತೆಗೆ ಬೇರೆ ಬೇರೆ ಅಭಿವೃದ್ಧಿ ಕೆಲ‌ಸ ಮಾಡುವ ಬಗ್ಗೆಯೂ ಗಮನ ಕೊಡಬೇಕು ಎಂದಿದ್ದಾರೆ.

ಸಚಿವ ರಾಜಣ್ಣ  ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಅದು ಗೊತ್ತಿಲ್ಲ. ಪತ್ರ ಬರೆಯುವುದಾಗಿ ಹೇಳಿದ್ದಾರೆ. ಅದು ಸಲಹೆ ರೂಪದಲ್ಲಿ ಕೊಟ್ಟಿರಬಹುದು ಎಂದಿದ್ದಾರೆ.

ಇತ್ತೀಚಿನ ಸುದ್ದಿ

Exit mobile version