ಸ್ವಮೂತ್ರಪಾನ ಏಡ್ಸ್, ಕ್ಯಾನ್ಸರ್ ಗೆ ಮದ್ದು: ವಿವಾದಕ್ಕೆ ಕಾರಣವಾದ ಪದವಿಯ ಪಠ್ಯ
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಪದವಿಯ ವೈದ್ಯಕೀಯ ಸಮಾಜಶಾಸ್ತ್ರ ಪಠ್ಯದಲ್ಲಿ ಸ್ವಮೂತ್ರಪಾನವು ಏಡ್ಸ್ ಹಾಗೂ ಕ್ಯಾನ್ಸರ್ ಗೆ ಮದ್ದು ಎಂದು ಉಲ್ಲೇಖಿಸಲಾಗಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.
ಪಠ್ಯದಲ್ಲಿ ಈ ವಿವಾದಿತ ಅಂಶವಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು. ದಿ.ಕೆ.ಭೈರಪ್ಪನವರ ಪಠ್ಯದಲ್ಲಿ ಸ್ವಮೂತ್ರಪಾನದಿಂದ ಕ್ಯಾನ್ಸರ್ ಗೆ ಚಿಕಿತ್ಸೆ ಎಂಬ ಮಾಹಿತಿ ನೀಡಲಾಗಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.
ಇನ್ನೂ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಆಯುರ್ವೇದ ತಜ್ಞ ಡಾ.ಗಿರಿಧರ ಕಜೆ, ಮನುಷ್ಯರ ಮೂತ್ರದಿಂದ ಕ್ಯಾನ್ಸರ್ ಗುಣಪಡಿಸುವ ಬಗ್ಗೆ ಯಾವುದೇ ವೈಜ್ಞಾನಿಕ ದಾಖಲೆಗಳಿಲ್ಲ. ಪ್ರಾಚೀನ ಗ್ರಂಥಗಳಲ್ಲೂ ಇದರ ಬಗ್ಗೆ ದಾಖಲೆಗಳಿಲ್ಲ ಎಂದಿದ್ದಾರೆ.
ಈ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶಿಸಿ ಈ ಅವೈಜ್ಞಾನಿಕ ಪಠ್ಯವನ್ನು ಹಿಂಪಡೆಯುವಂತೆ ವಿದ್ಯಾರ್ಥಿ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka