ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಂಬಲಪಾಡಿ ಆನಂದ ಶೆಟ್ಟಿ ನಿಧನ
ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಖ್ಯಾತ ಹಿರಿಯ ನ್ಯಾಯವಾದಿ ಅಂಬಲಪಾಡಿ ಆನಂದ ಶೆಟ್ಟಿಯವರು ಅಲ್ಪಕಾಲದ ಅಸೌಖ್ಯದಿಂದಾಗಿ ದಿನಾಂಕ: 27-01-2023ರಂದು ಬೆಂಗಳೂರಿನ ವಿಜಯನಗರದ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಓರ್ವ ಪುತ್ರ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯವಾದಿ ಅಜಿತ್ ಆನಂದ ಶೆಟ್ಟಿ ಹಾಗೂ ಓರ್ವ ಪುತ್ರಿಯನ್ನು ಅಗಲಿರುತ್ತಾರೆ.
ಮೃತರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕಳೆದ 45 ವರ್ಷಗಳಿಂದ ನ್ಯಾಯವಾದಿಯಾಗಿ ಸೇವೆಸಲ್ಲಿಸುತ್ತಾ ಬಂದಿದ್ದು ತಮ್ಮ ವೃತ್ತಿ ಜೀವನದಲ್ಲಿ ಅಪಾರ ಖ್ಯಾತಿಗಳಿಸಿದ್ದರು. ಬಡ ಕಕ್ಷಿಗಾರರುಗಳಿಗೆ ಉಚಿತವಾಗಿ ಕಾನೂನಿನ ನೆರವು ನೀಡುತ್ತಿದ್ದ ಶ್ರೀಯುತರು ಅಪಾರ ಸಂಖ್ಯೆಯ ಕಕ್ಷಿಗಾರರನ್ನೂ, ಬಂಧು ಮಿತ್ರರನ್ನೂ ಅಗಲಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























