ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ‘ಭಾರತ ರತ್ನ’  ಘೋಷಣೆ

l k advani
03/02/2024

ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಪ್ರತಿಷ್ಠಿತ ‘ಭಾರತ ರತ್ನ’ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ.

ಬಿಜೆಪಿ ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ಎಲ್.ಕೆ.ಅಡ್ವಾಣಿ  ಆರೆಸ್ಸೆಸ್ ಸದಸ್ಯರು ಕೂಡ ಆಗಿದ್ದರು.  ರಾಮಮಂದಿರ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು. 2002ರಿಂದ 2004ವರೆಗೆ ಭಾರತದ ಉಪ ಪ್ರಧಾನಿಯಾಗಿದ್ದರು.

ಲೋಕಸಭೆಯಲ್ಲಿ ಅತ್ಯಂತ ದೀರ್ಘಾವಧಿಯವರೆಗೂ ವಿರೋಧ ಪಕ್ಷದ ನಾಯಕರಾಗಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿದ್ದರು. ಆದ್ರೆ ಆ ಸಂದರ್ಭದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ಬಳಿಕ ರಾಜಕಾರಣದಿಂದ ಎಲ್.ಕೆ.ಅಡ್ವಾಣಿ ಮರೆಯಾದರು.

ಇತ್ತೀಚಿನ ಸುದ್ದಿ

Exit mobile version