ವಿದಾಯ: ಮಣಿಪುರದ ಹಿರಿಯ ಕಾಂಗ್ರೆಸ್ ನಾಯಕ ಪಕ್ಷಕ್ಕೆ ರಾಜೀನಾಮೆ

31/03/2024

ಮಣಿಪುರದ ಮಾಜಿ ಸಚಿವ ಇರೆಂಗ್ಬಾಮ್ ಹೇಮಚಂದ್ರ ಸಿಂಗ್ ಭಾನುವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಅವರು ಹೊಂದಿದ್ದ ಇತರ ಎಲ್ಲಾ ಸ್ಥಾನಗಳನ್ನು ತ್ಯಜಿಸಿದ್ದಾರೆ.

ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಮೇಘಚಂದ್ರ ಅವರಿಗೆ ರಾಜೀನಾಮೆ ಸಲ್ಲಿಸಿದ ಅವರು, ಪಕ್ಷದ ಹೈಕಮಾಂಡ್ ಮೇಲೆ ತಮಗೆ ಯಾವುದೇ ನಂಬಿಕೆ ಮತ್ತು ವಿಶ್ವಾಸ ಉಳಿದಿಲ್ಲ ಎಂದು ಹೇಳಿದ್ದಾರೆ.

ಬೇರೆ ಯಾವುದೇ ಪಕ್ಷಕ್ಕೆ ಸೇರುವ ಉದ್ದೇಶವಿಲ್ಲ ಎಂದು ಅವರು ಘೋಷಿಸಿದ್ದಾರೆ. ನನ್ನನ್ನು ಮುಕ್ತಗೊಳಿಸಲು ಮತ್ತು ನನ್ನ ಜನರ ಪರವಾಗಿ ಮಾತನಾಡುವಾಗ ಮುಕ್ತವಾಗಿ ಮಾತನಾಡಲು ಸಾಧ್ಯವಾಗುವಂತೆ ನಾನು ಪಕ್ಷವನ್ನು ತೊರೆದಿದ್ದೇನೆ ಎಂದು ಮಾಜಿ ಶಾಸಕರು ಹೇಳಿದ್ದಾರೆ.

ಪಕ್ಷದ ಹೈಕಮಾಂಡ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕಳೆದ ವರ್ಷ ಮೈಟಿ ಮತ್ತು ಕುಕಿ ಸಮುದಾಯಗಳ ನಡುವೆ ಭುಗಿಲೆದ್ದ ಹಿಂಸಾಚಾರದಿಂದ ರಾಜ್ಯದ ಜನರು ಬಳಲುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version