ಖ್ಯಾತ ಹಿರಿಯ ಸಾಹಿತಿ ನಾ ಡಿಸೋಜಾ ನಿಧನ - Mahanayaka
9:20 PM Wednesday 17 - September 2025

ಖ್ಯಾತ ಹಿರಿಯ ಸಾಹಿತಿ ನಾ ಡಿಸೋಜಾ ನಿಧನ

na d'Souza
05/01/2025

ಬೆಂಗಳೂರು: ಕರ್ನಾಟಕದ ಹಿರಿಯ ಸಾಹಿತಿ ನಾ ಡಿಸೋಜಾ ಅವರು ಇಂದು ಸಂಜೆ ಸುಮಾರು 7:50ಕ್ಕೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.


Provided by

ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾ ಡಿಸೋಜಾ ಅವರು ವಯೋಸಹಜ ಕಾಯಿಲೆಯಿಂದ  ನಿಧನರಾಗಿದ್ದಾರೆ. ಅವರ ನಿಧನವನ್ನು  ನಾ ಡಿಸೋಜಾ ಅವರ ಪುತ್ರ ನವೀನ್ ನಾ ಡಿಸೋಜಾ ದೃಢಪಡಿಸಿದ್ದಾರೆ.

ಫೇಸ್ ಬುಕ್ ಪೋಸ್ಟ್ ಮೂಲಕ ನಾ ಡಿಸೋಜಾ ಅವರ ನಿಧನವನ್ನು ದೃಢಪಡಿಸಿದ ನವೀನ್,  ನಮ್ಮ ಪೂಜ್ಯ ತಂದೆ, ಖ್ಯಾತ ಸಾಹಿತಿ ನಾ ಡಿಸೋಜಾ ಅವರು  ಒಂದು(05.01.2025) ಸಂಜೆ 7:50ಕ್ಕೆ ಅನಾರೋಗ್ಯ ಕಾರಣ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ.  ಅವರ ಪಾರ್ಥಿವ ಶರೀರವನ್ನು ನಾಳೆ(ಜ.6) ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ