ಗೃಹಲಕ್ಷ್ಮೀ ಯೋಜನೆಯ ಪ್ರತ್ಯೇಕ ಆ್ಯಪ್ ಸಚಿವ ಸಂಪುಟ ಅಸ್ತು: ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಬಹುದು
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಪ್ರತ್ಯೇಕ ಆ್ಯಪ್‍ಗೆ ಇಂದು ನಡೆದ ಸಚಿವ ಸಂಪುಟ ಅಸ್ತು ಎಂದಿದೆ. ಈ ಮೂಲಕ ಆಗಸ್ಟ್ ನಲ್ಲಿ ಗೃಹಿಣಿಯರ ಅಕೌಂಟ್ 2 ಸಾವಿರ ರೂ. ಜಮೆಮಾಡಲು ಸರ್ಕಾರ ನಿರ್ಧರಿಸಿದೆ.
ಹೆಚ್ಚೆಚ್ಚು ಅರ್ಜಿ ಸಲ್ಲಿಕೆ ಆದರು ಸರ್ವರ್ ಬ್ಯುಸಿ ಆಗದಂತೆ ಪ್ಲಾನ್ ಮಾಡಲಾಗುತ್ತಿದೆ. ಬಾಪೂಜಿ ಸೇವಾ ಕೇಂದ್ರದ ಮೂಲಕವು ಅರ್ಜಿ ಸ್ವೀಕಾರ ಮಾಡುವ ಸಾಧ್ಯತೆಗಳಿವೆ. ಮಾಹಿತಿ ಸಂಗ್ರಹ, ನೋಂದಣಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಕೆ ಮಾಡಬಹುದು.
ಗ್ರಾಮಗಳಲ್ಲಿ ಪ್ರಜಾ ಪ್ರತಿನಿಧಿಗಳ ನೇಮಕದ ಮೂಲಕ ಅರ್ಜಿ ಸಲ್ಲಿಕೆಗೆ ಸಿದ್ಧತೆ ನಡೆಸಲಾಗುತ್ತಿದೆ. ಮೊಬೈಲ್ ನಲ್ಲೇ ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಒನ್, ಗ್ರಾಮ ಒನ್, ಹಾಗೂ ಸೇವಾ ಕೇಂದ್ರಗಳಲ್ಲು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಬಹುದು. ಖಾಸಗಿ ಸೈಬರ್ ಗಳಲ್ಲೂ ನೋಂದಣಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಎಂ ಸಿದ್ದರಾಮಯ್ಯಗೆ ಆಪ್ ಬಗ್ಗೆ ವಿವರಣೆ ನೀಡಿದರು. ಅಲ್ಲದೆ ಪ್ರತ್ಯೇಕ ಆಪ್ ಬಗ್ಗೆ ಸಂಪುಟ ಸಹೋದ್ಯೋಗಿಗಳಿಗೂ ಮಾಹಿತಿ ನೀಡಿದರು.
ಬಳಿಕ ಆಪ್ ಬಗ್ಗೆ ಗ್ರೀನ್ ಸಿಗ್ನಲ್ ನೀಡಲಾಯಿತು. ಅರ್ಜಿ ಸಲ್ಲಿಕೆ ಆರಂಭದದಿನಾಂಕದ ಮಾಹಿತಿ ಸಿಕ್ಕಿಲ್ಲವಾದರುಯ ಈ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಕಲ ಸಿದ್ಧತೆ ನಡೆಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























