12:20 AM Saturday 23 - August 2025

ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

muslim girls college
02/12/2022

ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಮುಸ್ಲಿಮ್ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಬಗ್ಗೆ ಚರ್ಚೆಯಾಗಿಲ್ಲ ಎಂದಿದ್ದಾರೆ.

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಸರ್ಕಾರದಲ್ಲಿ ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಬೇಕು ಎಂದರು.

ಇದೇ ವೇಳೆ ಬಿಜೆಪಿ ಪಕ್ಷಕ್ಕೆ ರೌಡಿಶೀಟರ್ ಸೈಲೆಂಟ್ ಸುನೀಲ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,  ಪಕ್ಷದಲ್ಲಿ ಯಾವುದೇ ರೌಡಿಗಳನ್ನು ನಾವು ಸೇರ್ಪಡೆ ಮಾಡುವುದಿಲ್ಲ. ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version