ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಮೂವರು ಮಹಿಳೆಯರ ಸರಣಿ ಸಾವು: ಕರ್ತವ್ಯ ಲೋಪದಡಿ ಮೂವರು ಅಮಾನತು
ತುಮಕೂರು: ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ 7 ಮಂದಿ ಮಹಿಳೆಯರ ಪೈಕಿ ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ.
ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್ ಹೆರಿಗೆ ಒಳಗಾಗಿದ್ದ ಮೂವರು ಮಹಿಳೆಯರು. ಐದು ದಿನಗಳ ಅವಧಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಎನ್ ಹೆಚ್.ಎಂ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮೂವರನ್ನು ಕರ್ತವ್ಯ ಲೋಪದ ಮೇಲೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ.
ಮೂವರು ರೋಗಿಗಳಾದ ಅನಿತಾ, ಅಂಜಲಿ, ನರಸಮ್ಮ ಮೃತಪಟ್ಟಿದ್ದರು. ರೋಗಿಗಳ ಮರಣಕ್ಕೆ ಸಂಬಂಧಿಸಿದಂತೆ ದಿ:24-02-2024 ರಂದು ಜಿಲ್ಲಾ ಆರೋಗ್ಯ ಮತ್ತು ಕುಟಸಬ ಕಲ್ಯಾಣಾಧಿಕಾರಿಗಳು ತುಮಕೂರು ಮತ್ತು ತನಿಖಾ ತಂಡ ಇವರು ಇಲ್ಲಿ ಖುದ್ದು ಭೇಟಿ ನೀಡಿ ಪರಿಶೀಲಿಸಿದೆ. ಶಸ್ತ್ರಚಿಕಿತ್ಸೆ ಮಾಡಿಕೊಂಡ ರೋಗಿಗಳಲ್ಲಿ ಸೋಂಕು ಹರಡಿಡುವ ಚಿಹ್ನೆಗಳು ಕಂಡುಬಂದಿದ್ದು ಮತ್ತು ಶಸ್ತ್ರಚಿಕಿತ್ಸಾ ಪ್ರಕ್ರಿಯೆಯಲ್ಲಿ ಲೋಪಕಂಡುಬಂದಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ.
ಸಾಮಾನ್ಯವಾಗಿ ಈ ರೀತಿ ಸೋಂಕು ಶಸ್ತ್ರಚಿಕಿತ್ಸಾ ಕೊಠಡಿ ಧೂಮಿಕರಣ ಮಾಡದೇ ಇದ್ದಾಗ ಹಾಗೂ ಶಸ್ತ್ರಚಿಕಿತ್ಸಾ ಕೊಠಡಿಯ ಸಲಕರಣೆಗಳನ್ನು AUTO CLAVE ಮಾಡದೇ ಇದ್ದ ಸಂದರ್ಭದಲ್ಲಿ ಈ ರೀತಿಯ ಸೋಂಕು ಹರಡುವ ಸಾಧ್ಯತೆ ಇದ್ದು, ಈ ಕಾರಣದಿಂದ ಮೂರು ಮರಣಕ್ಕೆ ಕಾರಣವಾಗಿರುವುದು ಕಂಡು ಬಂದಿರುತ್ತದೆ. ಆದ್ದರಿಂದ ಜಿಲ್ಲಾ ಆರೋಗ್ಯ ಸಂಘದ ಕರಾರು ಒಪ್ಪಂದದ ಪ್ರಕಾರ ಕರ್ತವ್ಯ ಲೋಪ ಹಾಗೂ ಕರ್ತವ್ಯ ನಿರ್ಲಕ್ಷತನ, ಬೇಜವಬ್ದಾರಿತನ ತೋರಿದ ಹಿನ್ನಲೆಯಲ್ಲಿ ಆದೇಶಿಸಿದೆ.
ಈ ಕೆಳಕಂಡ ಎನ್.ಹೆಚ್.ಎಂ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ಜಿಲ್ಲಾ ಆರೋಗ್ಯ ಸಂಘದ ಕರಾರು ಒಪ್ಪಂದದ ಪ್ರಕಾರ ಕರ್ತವ್ಯ ಲೋಪ ಹಾಗೂ ಕರ್ತವ್ಯ ನಿರ್ಲಕ್ಷತನ, ಬೇಜವಬ್ದಾರಿತನ ತೋರಿದ ಹಿನ್ನಲೆಯಲ್ಲಿ 27/02/2024 ರಿಂದ ಅನ್ವಯವಾಗುವಂತೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ.
ಪದ್ಮಾವತಿ.ಜಿ ಶುಶೂಷಣಾಧಿಕಾರಿ, ಡಾ.ಪೂಜ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು ಸಾರ್ವಜನಿಕ ಆಸ್ಪತ್ರೆ ಪಾವಗಡ ತಾಲೂಕು ತುಮಕೂರು ಜಿಲ್ಲೆ, ಕಿರಣ್ ವಜಾಗೊಂಡವರು.
ಫೆಬ್ರವರಿ 22 ನೇ ತಾರೀಕು 7 ಮಂದಿಗೆ ಹೆರಿಗೆ ಸೇರಿದ್ದಂತೆ ವಿವಿಧ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ ಮಹಿಳೆ 30 ವರ್ಷದ ಅನಿತಾ ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾವನ್ನಪ್ಪಿದ್ದರೆ.
ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅಂಜಲಿಯನ್ನ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆಬ್ರವರಿ 24 ರಂದು ಮೃತಪಟ್ಟಿದ್ದಾರೆ.
ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ ಸ್ಥಿತಿ ಗಂಭೀರವಾಗಿತ್ತು.ನರಸಮ್ಮ ಅವರನ್ನು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ನೇ ತಾರೀಕು ನರಸಮ್ಮ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಮೂವರು ಫೆಬ್ರವರಿ 22ನೇ ತಾರೀಕು ಶಸ್ತ್ರ ಚಿಕಿತ್ಸೆ ಒಳಗಾಗಿದ್ದರು. ಈ ಮೂರು ಸಾವಿಗೆ ನ್ಯಾಯ ಒದಗಿಸುವಂತೆ ಇಂದುಅಂಜಲಿ ಕುಟುಂಬಸ್ಥರಿಂದ ಪಾವಗಡದಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ಎಲ್ಲಾ ಶಸ್ತ್ರ ಚಿಕಿತ್ಸೆಯನ್ನು ಡಾ. ಪೂಜಾ ನಡೆಸಿದ್ದರು. 7 ಜನರಲ್ಲಿ ಉಳಿದ ನಾಲ್ವರು ಆರೋಗ್ಯವಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth