ಹೃದಯದ ಗಂಭೀರ ಕಾಯಿಲೆ: ದಿಢೀರ್ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್

ನವದೆಹಲಿ: ಆಗಾಗ ವಿವಾದಗಳಿಗೆ ಕಾರಣವಾಗುತ್ತಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅನಾರೋಗ್ಯದ ಕಾರಣಕ್ಕೆ ಸುದ್ದಿಯಾಗಿದ್ದಾರೆ. ರಾಖಿ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಖಿ ಸಾವಂತ್ ಅವರಿಗೆ ದಿಢೀರ್ ಆಗಿ ಆರೋಗ್ಯ ಕೈಕೊಟ್ಟಿದೆ. ಅವರು ಆಸ್ಪತ್ರೆಯ ಹಾಸಿಗೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ರಾಖಿ ಸಾವಂತ್ ಗಂಭೀರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ. ಚಿತ್ರಗಳಲ್ಲಿ, ನರ್ಸ್ ತನ್ನ ಬಿಪಿಯನ್ನು ಪರೀಕ್ಷಿಸುತ್ತಿರುವುದನ್ನು ಕಾಣಬಹುದು. ಹಿಂಭಾಗದಲ್ಲಿ ದೊಡ್ಡ ಇಸಿಜಿ ಯಂತ್ರವನ್ನು ಸಹ ಕಂಡು ಬರುತ್ತದೆ. ಪ್ರಸ್ತುತ ಆಕೆಗೆ ಗಂಭೀರ ಹೃದಯ ಸಮಸ್ಯೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ಆದ್ರೆ ನಟಿಗೆ ಏನಾಗಿದೆ ಎನ್ನುವ ಸ್ಪಷ್ಟ ಮಾಹಿತಿಗಳು ಇನ್ನೂ ಬಹಿರಂಗಗೊಂಡಿಲ್ಲ, ಇನ್ನಷ್ಟೇ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97