ದಲಿತ ಕಾರ್ಮಿಕೆಯ ಮೇಲೆ ಗನ್ ತೋರಿಸಿ ಲೈಂಗಿಕ ದೌರ್ಜನ್ಯ: ನಾಗರಿಕ ಸೇವಾ ಅಧಿಕಾರಿ ಬಂಧನ
ಹರಿಯಾಣ ನಾಗರಿಕ ಸೇವೆಗಳ ಅಧಿಕಾರಿ ಕುಲಭೂಷಣ್ ಬನ್ಸಾಲ್ ಅವರನ್ನು ಹಿಸಾರ್‌ನಲ್ಲಿ ದಲಿತ ಸಮುದಾಯದ ಕಾರ್ಮಿಕೆಯೋರ್ವರು ಲೈಂಗಿಕ ಶೋಷಣೆಯ ಗಂಭೀರ ಆರೋಪ ಮಾಡಿದ ನಂತರ ಬಂಧಿಸಲಾಗಿದೆ.
ಮಾಧ್ಯಮ ವರದಿಗಳ ಪ್ರಕಾರ, ಆರೋಪಿ ಅಧಿಕಾರಿಯನ್ನು ಈ ವಾರದ ಆರಂಭದಲ್ಲಿ ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಯಾಕೆಂದರೆ ಅವ್ರ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿ ಆಧಾರಿತ ತಾರತಮ್ಯದ ಆರೋಪಗಳು ಇದೆ.
ಸಂತ್ರಸ್ತೆಯ ಪ್ರಕಾರ, ಬನ್ಸಾಲ್ ಅವರು 2020 ರಲ್ಲಿ ಫತೇಹಾಬಾದ್ ನಲ್ಲಿ ಪೋಸ್ಟ್ ಮಾಡುತ್ತಿದ್ದಾಗ ಗನ್ ಪಾಯಿಂಟ್ ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಪ್ರಸ್ತುತ ಹರಿಯಾಣ ಕೌಶಲ್ ರೋಜ್ಗಾರ್ ನಿಗಮ್ ಅಡಿಯಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆ, ಘಟನೆಗಳ ಸಮಯದಲ್ಲಿ ಬನ್ಸಾಲ್ ಜಾತಿ ನಿಂದನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಆರೋಪಿ ಅಧಿಕಾರಿ ಪಿಸ್ತೂಲ್ ಹಿಡಿದು ಬೆದರಿಕೆ ಹಾಕಿದ್ದಾರೆ. ಅವರ ಬೇಡಿಕೆಗಳನ್ನು ಪಾಲಿಸದಿದ್ದರೆ ಅವರನ್ನು ಕೊಲ್ಲಲಾಗುವುದು ಅಥವಾ ಕೆಲಸದಿಂದ ವಜಾಗೊಳಿಸಲಾಗುವುದು ಎಂದು ಬೆದರಿಸಿದ್ದರು.
ದೂರು ದಾಖಲಾದ ನಂತರ, ಸಂತ್ರಸ್ತೆಯ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ. ಅತ್ತ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಉಪ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಕುಮಾರ್ ನೇತೃತ್ವದ ತಂಡ ಶನಿವಾರ ಬನ್ಸಾಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಅವರನ್ನು ಬಂಧಿಸಲಾಯಿತು. ರಾಜ್ಯ ಸರ್ಕಾರ ಗುರುವಾರ ಅವರನ್ನು ಅಮಾನತುಗೊಳಿಸಿದ ನಂತರ ಅವರ ಬಂಧನ ಪ್ರಕ್ರಿಯೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj