ಆಂಧ್ರದಲ್ಲಿ ಭೀಕರ ಅಪಘಾತ: ಟ್ರಕ್ ಬಸ್ ಡಿಕ್ಕಿಯಾಗಿ 7 ಮಂದಿ ಸಾವು - Mahanayaka
1:27 AM Saturday 13 - September 2025

ಆಂಧ್ರದಲ್ಲಿ ಭೀಕರ ಅಪಘಾತ: ಟ್ರಕ್ ಬಸ್ ಡಿಕ್ಕಿಯಾಗಿ 7 ಮಂದಿ ಸಾವು

10/02/2024

ಟ್ರಕ್ ಮತ್ತು ಬಸ್ ಡಿಕ್ಕಿಯಾಗಿ ಏಳು ಮಂದಿ ಮೃತಪಟ್ಟಿರುವ ಭೀಕರ ಘಟನೆ ಆಂಧ್ರ ಪ್ರದೇಶದ ನೆಲ್ಲೂರುಜಿಲ್ಲೆಯ ಕವಲಿಯ ಮುಸುನೂರು ಟೋಲ್​ ಪ್ಲಾಜಾ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ.


Provided by

ಚೆನ್ನೈನಿಂದ ಖಾಸಗಿ ಬಸ್​ ಹೈದರಾಬಾದ್​ಗೆ ಬರುತ್ತಿತ್ತು. ಇಂದು ನಸುಕಿನ ಜಾವ ನೆಲ್ಲೂರು ಬಳಿ ಮೊದಲು ಟ್ರಕ್​ವೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬಸ್​ ಮಧ್ಯೆ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬಸ್​ನಲ್ಲಿದ್ದ ಚಾಲಕ ಸಮೇತ 7 ಮಂದಿ ಸಾವನ್ನಪ್ಪಿದ್ದು, ಸುಮಾರು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಇನ್ನು ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯ ಕೈಗೊಂಡು ಪೊಲೀಸರಿಗೆ ಮಾಹಿತಿ ರವಾನಿಸಿದರು. ಸುದ್ದಿ ತಿಳಿಯುತ್ತಿದ್ದಂತೆ ಹೈವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಕೈಗೊಂಡರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರ ಗುರುತು ಪತ್ತೆ ಇನ್ನು ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ