ಛತ್ತೀಸ್ ಗಢದಲ್ಲಿ ಎನ್ ಕೌಂಟರ್: 7 ಮಂದಿ ನಕ್ಸಲರ ಹತ್ಯೆ - Mahanayaka
11:20 PM Wednesday 17 - September 2025

ಛತ್ತೀಸ್ ಗಢದಲ್ಲಿ ಎನ್ ಕೌಂಟರ್: 7 ಮಂದಿ ನಕ್ಸಲರ ಹತ್ಯೆ

24/05/2024

ಛತ್ತೀಸ್ ಗಢದ ನಾರಾಯಣಪುರ ಮತ್ತು ಬಿಜಾಪುರ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಏಳು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


Provided by

ಪೊಲೀಸ್ ಅಧಿಕಾರಿಗಳ ಪ್ರಕಾರ, ನಾರಾಯಣಪುರ, ದಾಂತೇವಾಡ ಮತ್ತು ಬಿಜಾಪುರದ ಗಡಿ ಪ್ರದೇಶಗಳಲ್ಲಿ ನಕ್ಸಲ್ ವಿರೋಧಿ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಎನ್ ಕೌಂಟರ್ ನಡೆದಿದೆ.

ಇದಕ್ಕೂ ಮುನ್ನ ಮೇ 10 ರಂದು ಬಿಜಾಪುರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ 12 ಮಂದಿ ನಕ್ಸಲರು ಸಾವನ್ನಪ್ಪಿದ ನಂತರ ಛತ್ತೀಸ್ ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಭದ್ರತಾ ಪಡೆಗಳನ್ನು ಅಭಿನಂದಿಸಿದ್ದರು. ಬಿಜಾಪುರ ಜಿಲ್ಲೆಯ ಗಂಗಲೂರು ಪ್ರದೇಶದಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಎನ್ ಕೌಂಟರ್ ನಡೆದಿದೆ. ನಕ್ಸಲರ 12 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ನಾನು ನಮ್ಮ ಜವಾನರು ಮತ್ತು ಹಿರಿಯ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ. ನಾವು ಅಧಿಕಾರಕ್ಕೆ ಬಂದಾಗಿನಿಂದ ನಕ್ಸಲೀಯರ ವಿರುದ್ಧ ಬಲವಾಗಿ ಹೋರಾಡಿದ್ದೇವೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕೂಡ ಛತ್ತೀಸ್ ಗಢದಲ್ಲಿ ನಕ್ಸಲಿಸಂ ಕೊನೆಗೊಳ್ಳಬೇಕೆಂದು ಬಯಸುತ್ತಾರೆ. ಡಬಲ್ ಇಂಜಿನ್ ಸರ್ಕಾರದಿಂದ ನಾವು ಲಾಭ ಪಡೆಯುತ್ತಿದ್ದೇವೆ” ಎಂದು ಸಿಎಂ ವಿಷ್ಣು ದೇವ್ ಸಾಯಿ ಎಎನ್ಐಗೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿರುವ ಕಂಕೇರ್‌ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ 29 ನಕ್ಸಲರು ಸಾವನ್ನಪ್ಪಿದ್ದರು ಮತ್ತು ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್ ಗಢದಲ್ಲಿ 29 ನಕ್ಸಲರನ್ನು ಹತ್ಯೆಗೈದ ಎನ್‌ಕೌಂಟರ್ ಕಾರ್ಯಾಚರಣೆಗಾಗಿ ಭದ್ರತಾ ಪಡೆಗಳನ್ನು ಅಭಿನಂದಿಸಿದರು ಮತ್ತು ದೇಶವನ್ನು ಈ ಪಿಡುಗಿನಿಂದ ಮುಕ್ತಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು. ನಕ್ಸಲಿಸಂ ಅಭಿವೃದ್ಧಿ, ಶಾಂತಿ ಮತ್ತು ಯುವಕರ ಉಜ್ವಲ ಭವಿಷ್ಯದ ಅತಿದೊಡ್ಡ ಶತ್ರುವಾಗಿದೆ ಎಂದು ಶಾ ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ