ನವ ಮಂಗಳೂರು ಬಂದರಿಗೆ ‘ಸೆವೆನ್ ಸೀಸ್ ಎಕ್ಸ್‌ಪ್ಲೋರರ್’ ಹಡಗು

ಮಂಗಳೂರಿನ ನವ ಮಂಗಳೂರು ಬಂದರಿಗೆ ‘ಸೆವೆನ್ ಸೀಸ್ ಎಕ್ಸ್‌ಪ್ಲೋರರ್’ ಹಡಗು ಆಗಮಿಸಿತು. ಇದು ಈ ಋತುವಿನ ಎರಡನೇ ಕ್ರೂಸ್ ಹಡಗು ಆಗಿದೆ. ಈ ಹಡಗಿನಲ್ಲಿ 686 ಪ್ರಯಾಣಿಕರು ಮತ್ತು 552 ಸಿಬ್ಬಂದಿ ವರ್ಗದ ಸದಸ್ಯರಿದ್ದರು. ಹಡಗಿನಲ್ಲಿ ಆಗಮಿಸಿದ ಪ್ರಯಾಣಿಕರನ್ನು ಎನ್‌ಎಂಪಿಎ ಮತ್ತು ಎಂಪಿಎ ಅಧ್ಯಕ್ಷ ಡಾ. ಎ.ವಿ. ರಮಣ ಸ್ವಾಗತ ಕೋರಿದರು.
ಈ ತಂಡದ ಸದಸ್ಯರು ನಗರದ ಸಂತ ಅಲೋಶಿಯಸ್ ಚಾಪೆಲ್, ಕದ್ರಿ ದೇವಸ್ಥಾನ, ಕುದ್ರೋಳಿ ದೇವಸ್ಥಾನ, ಸ್ಥಳೀಯ ಮಾರುಕಟ್ಟೆ, ಗೋಡಂಬಿ ಕಾರ್ಖಾನೆ, ಕಾರ್ಕಳ ಗೋಮಟೇಶ್ವರ ಪ್ರತಿಮೆ, ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಭೇಟಿ ನೀಡಿದರು. ಕತರ್‌ನಿಂದ ಮಾಲ್ಡೀವ್ಸ್‌ಗೆ ತೆರಳುವ ಮಾರ್ಗದಲ್ಲಿ ಈ ಹಡಗು ಭಾರತಕ್ಕೆ ಬಂದು ಮೊರ್ಮುಗೋ ಬಂದರಿನಲ್ಲಿ ನಿಂತಿತ್ತು. ಬಳಿಕ ಶುಕ್ರವಾರ ಮಂಗಳೂರಿಗೆ ಆಗಮಿಸಿತು. ಪ್ರಯಾಣಿಕರಿಗೆ ಯಕ್ಷಗಾನ ಮತ್ತು ಸಾಂಪ್ರದಾಯಿಕ ಡೋಲು (ಚಂಡೆ) ಮುಂತಾದ ಸಾಂಪ್ರದಾಯಿಕ ಶೈಲಿಯಲ್ಲಿ ಆತ್ಮೀಯ ಸ್ವಾಗತ ನೀಡಲಾಯಿತು.
ಪ್ರಯಾಣಿಕರ ವೈದ್ಯಕೀಯ ತಪಾಸಣೆ, ಕ್ಷಿಪ್ರ ಸಂಚಾರಕ್ಕಾಗಿ ವಲಸೆ ಮತ್ತು ಕಸ್ಟಮ್ಸ್ ಕೌಂಟರ್‌ಗಳು, ಸ್ಥಳೀಯ ಮಾರುಕಟ್ಟೆಗೆ ಭೇಟಿ ನೀಡುವ ಪ್ರಯಾಣಿಕರಿಗೆ 2 ಶಟಲ್ ಬಸ್ ಸೇರಿದಂತೆ 25 ಕೋಚ್ ಗಳು ಮತ್ತು ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಅಂಗಡಿಗಳು, ಟ್ಯಾಕ್ಸಿಗಳು, ಪ್ರವಾಸಿ ವ್ಯಾನ್‌ಗಳು, ಆಯುಷ್ ಇಲಾಖೆಯಿಂದ ಧ್ಯಾನ ಕೇಂದ್ರವನ್ನು ಸಿದ್ಧಪಡಿಸಲಾಗಿದೆ. ಪ್ರವಾಸಿಗರಿಗೆ ಸ್ಥಳೀಯ ಜಾನಪದ ಮತ್ತು ಪ್ರದೇಶದ ಸಂಪ್ರದಾಯಗಳನ್ನು ಚಿತ್ರಿಸುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.