ಕರುವಿಗೆ ಲೈಂಗಿಕ ದೌರ್ಜನ್ಯ ಎಸಗಿದ ವೃದ್ಧ ಪೊಲೀಸ್ ವಶಕ್ಕೆ
ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಯುವಕನೊರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕೋಲಾರದ ಕೆಜಿಎಫ್ ತಾಲೂಕಿನ ಸುಂದರಪಾಳ್ಯದ ಬಡಾವಣೆಯಲ್ಲಿ ನಡೆದಿದೆ.
ಶಫೀ ಉಲ್ಲಾ(50) ಎಂಬಾತ ಬಂಧಿತ ಆರೋಪಿಯಾಗಿದ್ದು, ಕಾಮರೆಡ್ಡಿ ಎಂಬವರಿಗೆ ಸೇರಿದ ಹಸುವಿನ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದ.
ಈತ ಈ ಹಿಂದೆಯೂ ಇದೇ ರೀತಿಯ ಕೃತ್ಯ ಎಸಗಿದ್ದ ಎನ್ನಲಾಗಿದೆ. ಈ ವೇಳೆ ಗ್ರಾಮಸ್ಥರು ಆತನಿಗೆ ಬುದ್ಧಿ ಹೇಳಿದ್ದರು. ಆದರೆ ಆತ ಮತ್ತೆ ತನ್ನ ದುಷ್ಕೃತ್ಯವನ್ನು ಮುಂದುವರೆಸಿದ್ದು, ಇದರಿಂದ ಬೇಸತ್ತು ಈತನ ವಿರುದ್ಧ ದೂರು ನೀಡಿದ್ದಾರೆನ್ನಲಾಗಿದೆ.
ಘಟನಾ ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿದ್ದು, ಆರೋಪಿಯನ್ನು ಬೇತಮಂಗಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ದೌರ್ಜನ್ಯಕ್ಕೊಳಗಾದ ಕರು ಅಸ್ವಸ್ಥಗೊಂಡಿದೆ ಎಂದು ಹೇಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























