ಕಾಫಿ ಶಾಪ್ ನ ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮರಾ ಇದ್ದ ಕಾಮುಕ ಅರೆಸ್ಟ್ - Mahanayaka

ಕಾಫಿ ಶಾಪ್ ನ ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮರಾ ಇದ್ದ ಕಾಮುಕ ಅರೆಸ್ಟ್

wash room
11/08/2024

ಬೆಂಗಳೂರು: ಕಾಫಿಶಾಪ್ ನ ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮರಾ ಆನ್ ಮಾಡಿ ಇಟ್ಟಿದ್ದ ಕಾಮುಕನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ಮನೋಜ್ (23) ಬಂಧಿತ ಆರೋಪಿ ಅಂತ ಗುರುತಿಸಲಾಗಿದೆ. ಈತ ಕಾಫಿ ಶಾಪ್ ನಲ್ಲಿ ಕಾಫಿ ಮೇಕರ್ ಆಗಿದ್ದ. ಕಸದ ಡಬ್ಬಕ್ಕೆ ರಂಧ್ರ ಕೊರೆದು ಆರೋಪಿ ಮೊಬೈಲ್ ಇಟ್ಟಿದ್ದ ಆರೋಪಿ, ಮೊಬೈಲ್ ರಿಂಗ್ ಆಗದಂತೆ ಫ್ಲೈಟ್ ಮೂಡ್ ನಲ್ಲಿ ಮೊಬೈಲ್ ಇಟ್ಟಿದ್ದ.

ವಾಶ್ ರೂಮ್ ಗೆ ಹೋದ ಮಹಿಳೆಯೊಬ್ಬರಿಗೆ ಅನುಮಾನ ಬಂದಿದ್ದು, ಗಮನಿಸಿದಾಗ ಮೊಬೈಲ್ ಇಟ್ಟಿರುವುದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಆರೋಪಿಯನ್ನು ಕ್ಷಮೆ ಕೇಳಿಸಿ ಆತನನ್ನು ಕೆಲಸದಿಂದ ವಜಾ ಮಾಡಲಾಗಿತ್ತು. ಆದರೆ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ