ಲೈಂಗಿಕ ದೌರ್ಜನ್ಯ, ಬ್ಲ್ಯಾಕ್ ಮೇಲ್: ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್ ಐಆರ್

arun puttila
02/09/2024

ಪುತ್ತೂರು: ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.

47 ವರ್ಷದ ನೊಂದ ಮಹಿಳೆ ಅರುಣ್ ಪುತ್ತಿಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೇ ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಅಂತ ದಕ್ಷಿಣ ಕನ್ನಡ ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನನ್ವಯ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್ ಐಆರ್ ದಾಖಲಾಗಿದೆ.

2023 ರ ಜೂನ್ ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆ ಹಿನ್ನೆಲೆ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತಿಲ ಅವರ ಹಿಂದುತ್ವದ ಪ್ರತಿಪಾದನೆಯನ್ನು ಮೆಚ್ಚಿ ದೂರುದಾರೆ ಪುತ್ತಿಲಗೆ ಹತ್ತಿರವಾಗಿದ್ದರಂತೆ.

ತಡೆಯಾಜ್ಞೆ:

ಮಹಿಳೆ ದೂರು ನೀಡುವ ಸುಳಿವು ಇದ್ದ ಹಿನ್ನೆಲೆ ಅರುಣ್ ಪುತ್ತಿಲ,  ತನ್ನ ವಿರುದ್ಧ ಯಾವುದೇ ಚಿತ್ರ, ವರದಿ ನೀಡದಂತೆ ತಡೆ ನೀಡಬೇಕೆಂದು ನ್ಯಾಯಾಲಯದ ಮೊರೆ ಹೋಗಿದ್ದರು. ಪುತ್ತಿಲ ವಿರುದ್ಧ ಎಲ್ಲಾ ತರಹದ ವರದಿಗಳಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಬಗ್ಗೆ ಬೆಂಗಳೂರು ಸಿಟಿ ನ್ಯಾಯಾಲಯದ ಆದೇಶ ಕಾಪಿಯನ್ನು ಮಾಧ್ಯಮಗಳಿಗೆ ಪುತ್ತಿಲ ಬಿಡುಗಡೆ ಮಾಡಿದ್ದರು ಎಂದು ವರದಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version