ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.​ಡಿ. ರೇವಣ್ಣ ಎಸ್ ಐಟಿ ವಶಕ್ಕೆ - Mahanayaka

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.​ಡಿ. ರೇವಣ್ಣ ಎಸ್ ಐಟಿ ವಶಕ್ಕೆ

hd revanna
04/05/2024


Provided by

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.​ಡಿ. ರೇವಣ್ಣ ಅವರನ್ನು  ಎಸ್ ಐಟಿ ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್​ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.

ಮೈಸೂರಿನ ಕೆಆರ್​ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ರೇವಣ್ಣ ಅವರನ್ನು ಎಸ್ ಐಟಿ ವಶಕ್ಕೆ ಪಡೆದಿದೆ.

ರೇವಣ್ಣ ಬಂಧನಕ್ಕಾಗಿ ಎಸ್ ಐಟಿ ಅಧಿಕಾರಿಗಳು ಸಾಕಷ್ಟು ಹುಡುಕಾಟ ನಡೆಸಿದ್ದಾರೆ. ಇದೇ ವೇಳೆ ರೇವಣ್ಣ ದೇವೇಗೌಡರ ಮನೆಯಲ್ಲಿರುವ ಮಾಹಿತಿ ತಿಳಿದು, ಮನೆಗೆ ತೆರಳಿದೆ. ಸುಮಾರು 15 ನಿಮಿಷಗಳ ಕಾಲ ಬಾಗಿಲು ತೆರೆಯಲಿಲ್ಲ, ಆ ನಂತರ ರೇವಣ್ಣ ಸ್ವತಃ ಬಾಗಲು ತೆರೆದು ಹೊರ ಬಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ