ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಮಹಿಳೆಯಿಂದ ಲೈಂಗಿಕ ದೌರ್ಜನ್ಯ!
ಥಾಣೆ: 16 ವರ್ಷದ ಬಾಲಕನ ಮೇಲೆ 32 ಮಹಿಳೆಯೋರ್ವಳು ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದ್ದು, ಮಹಿಳೆಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೇರಿದಂತೆ ಹಲವು ಪ್ರಕರಣಗಳಡಿಯಲ್ಲಿ ಕೇಸು ದಾಖಲಾಗಿದೆ.
ಮಹಾರಾಷ್ಟ್ರದ ಠಾಣೆಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು, ನಾಸಿಕ್ ನಲ್ಲಿರುವ ತಮ್ಮ ಸಂಬಂಧಿಕರ ನೆರೆಹೊರೆಯಲ್ಲಿ ವಾಸಿಸುತ್ತಿದ್ದಳು. ಮುಂಬೈಗೆ ಆಗಾಗ ಬರುತ್ತಿದ್ದ ಮಹಿಳೆ ಇಲ್ಲಿನ 16 ವರ್ಷದ ಬಾಲಕನ ಜೊತೆಗೆ ಸ್ನೇಹ ಬೆಳೆಸಿದ್ದು, ಆತನಿಗೆ ಮದ್ಯ ಸೇವಿಸುವಂತೆ ಪ್ರೇರೇಪಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ ಎಂದು ಬಾಲಕನ ತಾಯಿ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
2019ರಿಂದ 2022ರ ಡಿಸೆಂಬರ್ ವರೆಗೆ ಮಹಿಳೆಯು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಬಾಲಕನಿಗೆ ಆಕ್ಷೇಪಾರ್ಗ ವಿಡಿಯೋಗಳನ್ನು ತೋರಿಸಿ ಮಹಿಳೆ ದುಷ್ಕೃತ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























