ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ- ಅಪರಾಧಿಗೆ ಎರಡು ವರ್ಷ ಶಿಕ್ಷೆ - Mahanayaka
3:36 AM Wednesday 20 - August 2025

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ- ಅಪರಾಧಿಗೆ ಎರಡು ವರ್ಷ ಶಿಕ್ಷೆ

shivakumar
29/06/2023


Provided by

ಚಾಮರಾಜನಗರ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ್ದ ವ್ಯಕ್ತಿಗೆ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಕೊಳ್ಳೇಗಾಲದ ಭೀಮನಗರ ನಿವಾಸಿ ಶಿವಕುಮಾರ್(37) ಶಿಕ್ಷೆಗೊಳಗಾದ ಅಪರಾಧಿ. ಅಪ್ರಾಪ್ತ ಬಾಲಕಿಯನ್ನು ಹಿಡಿದು ಎಳೆದೊಯ್ದು ಮಾನಭಂಗ ಮಾಡುವ ಉದ್ದೇಶದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದ. ಜೊತೆಗೆ, ಇದನ್ನು ಪ್ರಶ್ನಿಸಿದ ಬಾಲಕಿಯ ಪಾಲಕರಿಗೂ ಕೊಲೆ ಬೆದರಿಕೆ ಹಾಕಿದ್ದನು.

ಘಟನೆ ಸಂಬಂಧ 2021 ರ ಜನವರಿ 1 ರಂದು ಕೊಳ್ಳೇಗಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶಿವಕುಮಾರ್ ವಿರುದ್ಧ ಎಲ್ಲಾ ಆರೋಪಗಳು ಸಾಬೀತಾದ್ದರಿಂದ ನ್ಯಾ.ನಿಶಾರಣಿ ಅಪರಾಧಿಗೆ 2 ವರ್ಷ ಶಿಕ್ಷೆ ವಿಧಿಸಿ,ಸಂತ್ರಸ್ತ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರವು 2 ಲಕ್ಷ ರೂ‌. ಹಣವನ್ನು ಪರಿಹಾರ ರೂಪದಲ್ಲಿ ಕೊಡಬೇಕೆಂದು ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ಕೆ‌.ಯೋಗೇಶ್ ವಾದ ಮಂಡಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ